ಹೆಚ್‌ಎಂಟಿ ನೇಮಕಾತಿ ಡಿಜಿಎಂ / ಜೆಜಿಎಂ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ (ಹೆಚ್‌ಎಂಟಿ) ನೇಮಕಾತಿ ಡೆಪ್ಯುಟಿ ಜನರಲ್ ಮ್ಯಾನೇಜರ್ (ಡಿಜಿಎಂ) /ಜಾಯಿಂಟ್ ಜನರಲ್ ಮ್ಯಾನೇಜರ್ (ಜೆಜಿಎಂ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಹೆಚ್‌ಎಂಟಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೋಂದಿಗೆ ಕಚೇರಿಯ ವಿಳಾಸಕ್ಕೆ ಮೇ 14,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್‌ಎಂಟಿ ನೇಮಕಾತಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ  ಆಹ್ವಾನ

CRITERIA DETAILS
Name Of The Posts ಡೆಪ್ಯುಟಿ ಜನರಲ್ ಮ್ಯಾನೇಜರ್ (ಡಿಜಿಎಂ) /ಜಾಯಿಂಟ್ ಜನರಲ್ ಮ್ಯಾನೇಜರ್ (ಜೆಜಿಎಂ)
Organisation ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ (ಹೆಚ್‌ಎಂಟಿ)
Educational Qualification ಇಂಜಿನಿಯರಿಂಗ್ ಪದವಿ, ಎಂಬಿಎ
Job Location ಬೆಂಗಳೂರು (ಕರ್ನಾಟಕ)
Salary Scale ಡಿಜಿಎಂ - 32,900/-ರಿಂದ 58,000/-ರೂ ಮತ್ತು ಜೆಜಿಎಂ - 43,200/-ರೂ ರಿಂದ 66,000/-ರೂ
Application Start Date April 24, 2019
Application End Date May 14, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂಜಿನಿಯರಿಂಗ್‌ನಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೊತೆಗೆ ಎಂಬಿಎ ಮಾಡಿದ್ದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು.

ವಯೋಮಿತಿ:

ಹುದ್ದೆಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳು ಡಿಜಿಎಂ ಹುದ್ದೆಗಳಿಗೆ ಗರಿಷ್ಟ 45 ವರ್ಷ ಮತ್ತು ಜೆಜಿಎಂ ಹುದ್ದೆಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನವರಾಗಿರಬೇಕು.

ವೇತನದ ವಿವರ:

ಡಿಜಿಎಂ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 32,900/-ರಿಂದ 58,000/-ರೂ ಮತ್ತು ಜೆಜಿಎಂ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 43,200/-ರೂ ರಿಂದ 66,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹೆಚ್‌ಎಂಟಿಯ ಅಧಿಕೃತ ವೆಬ್‌ಸೈಟ್‌ http://www.hmti.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 14,2019 ರೊಳಗೆ ಅರ್ಜಿಯನ್ನು ಕಳುಹಿಸಬಹುದು.ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ:

ದಿ ಮ್ಯಾನೇಜರ್,
ಹೆಚ್‌ಎಂಟಿ (ಇಂಟರ್‌ನ್ಯಾಷನಲ್) ಲಿಮಿಟೆಡ್,
ಹೆಚ್‌ಎಂಟಿ ಭವನ,
ನಂ, 59,
ಬಳ್ಳಾರಿ ರೋಡ್,
ಬೆಂಗಳೂರು-560032

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
HMT International Limited Recruitment 2019-20:Apply for 02 DGM or JGM vacancies. Hindustan Machine Tools International Limited (HMT International Limited) invited applications from eligible and interested candidates to fill up DGM or JGM Posts through HMT International Limited official notification 2019. Job seekers who are looking for a career in Bangalore – Karnataka Government can make use of this opportunity. Apply offline for these HMT International Limited DGM or JGM jobs before 14th May 2019. Official website of HMT International Limited is www.hmti.com Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X