ಇಂಜಿನಿಯರಿಂಗ್ ಪದವೀಧರರಿಗೆ ಎಚ್‌ಪಿಎಸಿಎಲ್‌ ನಲ್ಲಿ ಉದ್ಯೋಗಾವಕಾಶ

ಗೇಟ್‌ ಅರ್ಹತೆ ಪಡೆದ ಮತ್ತು ಗೇಟ್ ಪರೀಕ್ಷೆಗೆ ನೋಂದಾಯಿಸಿರುವ ಎಂಜಿನಿಯರಿಂಗ್‌ ಪದವೀಧರರಿಗೆ 2018-19ನೇ ಸಾಲಿನಲ್ಲಿ ಉದ್ಯೊಗಾವಕಾಶಗಳನ್ನು ನೀಡಲಿದ್ದು, ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಭಾರತ ಸರ್ಕಾರದ ಅಧೀನಕ್ಕೆ ಒಳಪಡುವ ನವರತ್ನ ಕಂಪನಿಗಳಲ್ಲಿ ಒಂದಾಗಿರುವ ಹಿಂದೂಸ್ತಾನ್‌ ಪೆಟ್ರೊಲಿಯಂ ಕಾರ್ಪೋರೇಷನ್‌ ಲಿಮಿಟೆಡ್‌ (ಎಚ್‌ಪಿಎಸಿಎಲ್‌) ಎಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶಕ್ಕೆ ಮುಂದಾಗಿದೆ.

ಗೇಟ್‌ ಅರ್ಹತೆ ಪಡೆದ ಮತ್ತು ಗೇಟ್ ಪರೀಕ್ಷೆಗೆ ನೋಂದಾಯಿಸಿರುವ ಎಂಜಿನಿಯರಿಂಗ್‌ ಪದವೀಧರರಿಗೆ 2018-19ನೇ ಸಾಲಿನಲ್ಲಿ ಉದ್ಯೊಗಾವಕಾಶಗಳನ್ನು ನೀಡಲಿದ್ದು, ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಎಚ್‌ಪಿಎಸಿಎಲ್‌ ನಲ್ಲಿ ಉದ್ಯೋಗಾವಕಾಶ

ಗೇಟ್‌ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ. 2017ರ ಸೆಪ್ಟೆಂಬರ್‌ 1ರಿಂದ ಗೇಟ್‌ಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಕ್ಟೊಬರ್‌ 5 ರವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಉಳಿದಂತೆ ಗೇಟ್ ಪರೀಕ್ಷೆಗೆ ನೋಂದಾಯಿಸಿದ ಅಭ್ಯರ್ಥಿಗಳಿಗೆ 2018 ರ ಜನವರಿ 12 ರಿಂದ ಫೆಬ್ರವರಿ 12ರ ತನಕ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.

ಆಯ್ಕೆಯಾದ ಅಭ್ಯರ್ಥಿಗಳನ್ನು ಆಫೀಸರ್‌ಗಳಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ರೂ.24900 - 50,500/-

ವಿದ್ಯಾರ್ಹತೆ

ಕೆಮಿಕಲ್‌, ಮೆಕ್ಯಾನಿಕಲ್‌, ಎಲೆಕ್ಟ್ರಾನಿಕ್ಸ್‌ ಮತ್ತು ಟೆಲಿ ಕಮ್ಯುನಿಕೇಷನ್‌, ಎಲೆಕ್ಟ್ರಿಕಲ್‌, ಇನ್‌ಸ್ಟ್ರುಮೆಂಟೇಶನ್‌ ಮತ್ತು ಸಿವಿಲ್‌ ವಿಷಯಗಳಲ್ಲಿ ನಾಲ್ಕು ವರ್ಷದ ಎಂಜಿನಿಯರಿಂಗ್‌ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ.

ನಿಗದಿತ ವಿದ್ಯಾರ್ಹತೆಯಲ್ಲಿ ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ಶೇಕಡಾ 60 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇಕಡಾ 50 ಅಂಕಗಳೊಂದಿಗೆ ಪಾಸಾಗಿರಬೇಕು.

ಎಂಜಿನಿಯರಿಂಗ್‌ ಕೊನೆಯ ಪದವಿಯಲ್ಲಿ ಓದುತ್ತಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ.

ಪ್ರಮುಖ ದಿನಾಂಕಗಳು

  • ಗೇಟ್‌ ಎಗ್ಸಾಮ್‌ಗೆ ಅರ್ಜಿ ಸಲ್ಲಿಸಲು ಕೊನೆ ದಿನ: ಅಕ್ಟೋಬರ್‌ 5, 2017
  • ಎಚ್‌ಪಿಸಿಎಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ: ಜನವರಿ 12ರಿಂದ ಫೆಬ್ರವರಿ 12, 2018
  • ಗೇಟ್‌ ಆನ್‌ಲೈನ್‌ ಪರೀಕ್ಷೆ : ಫೆಬ್ರವರಿ, 2018

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 25 ವರ್ಷ ಮೀರಿರಬಾರದು. ಮೀಸಲಾತಿ ನಿಯಮದ ಪ್ರಕಾರ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ

  • ಅರ್ಜಿ ಶುಲ್ಕ 275 ರೂಪಾಯಿ ನಿಗದಿಪಡಿಸಲಾಗಿದೆ.
  • ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Hindustan petroleum corporation ltd invited online applications from eligible engineering graduates. company is recruiting Officers through GATE 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+