HPCL Recruitment 2021 : ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ನವೆಂಬರ್ 23,2021 ರಿಂದ ಪ್ರಾರಂಭವಾಗಿ ಡಿಸೆಂಬರ್ 06,2021 ರಂದು ಕೊನೆಗೊಳ್ಳುತ್ತದೆ.

ಹೆಚ್‌ಪಿಸಿಎಲ್ ನಲ್ಲಿ ಉದ್ಯೋಗಾವಕಾಶ

ಹೆಚ್‌ಪಿಸಿಎಲ್ ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಇನ್‌ಸ್ಟ್ರುಮೆಂಟೇಶನ್, ಕಂಪ್ಯೂಟರ್ ಸೈನ್ಸ್ (ಐಟಿ) ನಲ್ಲಿ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಶೇ.60ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.

ಹೆಚ್‌ಪಿಸಿಎಲ್ ನೇಮಕಾತಿ 2021 ವಯೋಮಿತಿ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವೆಂಬರ್ 22,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹೆಚ್‌ಪಿಸಿಎಲ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಕಿರುಪಟ್ಟಿಯನ್ನು ಮಾಡಿ ಆಯ್ಕೆಯನ್ನು ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹೆಚ್‌ಪಿಸಿಎಲ್ ನೇಮಕಾತಿ 2021 ವೇತನ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ಸ್ಟೈಫೆಂಡ್ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಹೆಚ್‌ಪಿಸಿಎಲ್ ನೇಮಕಾತಿ 2021 ಅರ್ಜಿ ಶುಲ್ಕ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆ 2021 ಅನ್ನು ಓದಬಹುದು.

ಹೆಚ್‌ಪಿಸಿಎಲ್ ನೇಮಕಾತಿ 2021 ಅರ್ಜಿ ಸಲ್ಲಿಕೆ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://portal.mhrdnats.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 22,2021 ರಿಂದ ಡಿಸೆಂಬರ್ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
HPCL recruitment 2021 notification has been released for graduate apprentice trainee posts. Interested candidates can apply before Dec 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+