ಭಾರತೀಯ ಏರ್ ಫೋರ್ಸ್ ನಲ್ಲಿ 4 ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಆಸಕ್ತ ಅಭ್ಯರ್ಥಿಗಳು ಆಫಲೈನ್ ಮೂಲಕ ಮೇ 21,2022 ರಿಂದ ಜೂನ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

IAF ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ಏರ್ ಫೋರ್ಸ್ ನೇಮಕಾತಿಯ ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ 10+2ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
IAF ನೇಮಕಾತಿ 2022 ವಯೋಮಿತಿ :
ಭಾರತೀಯ ಏರ್ ಫೋರ್ಸ್ ನೇಮಕಾತಿಯ ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ನವೆಂಬರ್ 28,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
IAF ನೇಮಕಾತಿ 2022 ವೇತನದ ವಿವರ :
ಭಾರತೀಯ ಏರ್ ಫೋರ್ಸ್ ನೇಮಕಾತಿಯ ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

IAF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಭಾರತೀಯ ಏರ್ ಫೋರ್ಸ್ ನೇಮಕಾತಿಯ ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
IAF ನೇಮಕಾತಿ 2022 ಅರ್ಜಿ ಶುಲ್ಕ :
ಭಾರತೀಯ ಏರ್ ಫೋರ್ಸ್ ನೇಮಕಾತಿಯ ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
IAF ನೇಮಕಾತಿ 2022 ಅರ್ಜಿ ಸಲ್ಲಿಕೆ :
ಭಾರತೀಯ ಏರ್ ಫೋರ್ಸ್ ನೇಮಕಾತಿಯ ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://indianairforce.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 21,2022 ರಿಂದ ಜೂನ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು.
ಕಚೇರಿ ವಿಳಾಸ:
Presiding Officer, Civilian Recruitment Board, Air Force Record Office, Subroto Park, New Delhi-110010.
ಅಭ್ಯರ್ಥಿಗಳಿಗೆ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.