IAF Recruitment 2022 : 80 ಟೆಕ್ನಿಕಲ್ ಅಪ್ರೆಂಟಿಸ್ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಏರ್ ಫೋರ್ಸ್ ನಲ್ಲಿ 80 ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 19,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಭಾರತೀಯ ಏರ್ ಫೋರ್ಸ್ ನಲ್ಲಿ 80 ಹುದ್ದೆಗಳ ನೇಮಕಾತಿ

IAF ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತೀಯ ಏರ್ ಫೋರ್ಸ್ ನೇಮಕಾತಿಯ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ ಮತ್ತು 10+2ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

IAF ನೇಮಕಾತಿ 2022 ವಯೋಮಿತಿ :

ಭಾರತೀಯ ಏರ್ ಫೋರ್ಸ್ ನೇಮಕಾತಿಯ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಏಪ್ರಿಲ್ 1,2022ರ ಅನ್ವಯ ಕನಿಷ್ಟ 14 ರಿಂದ ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 24 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

IAF ನೇಮಕಾತಿ 2022 ವೇತನದ ವಿವರ :

ಭಾರತೀಯ ಏರ್ ಫೋರ್ಸ್ ನೇಮಕಾತಿಯ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,700/-ರೈ ಸ್ಟೈಫೆಂಡ್ ನೀಡಲಾಗುವುದು.

IAF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ಏರ್ ಫೋರ್ಸ್ ನೇಮಕಾತಿಯ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

IAF ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ಏರ್ ಫೋರ್ಸ್ ನೇಮಕಾತಿಯ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

IAF ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ಏರ್ ಫೋರ್ಸ್ ನೇಮಕಾತಿಯ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.apprenticeshipindia.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 19,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳಿಗೆ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IAF recruitment 2022 notification has been released for 80 technical apprentice Posts. Interested candidates can apply before February 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X