IBPS Clerk Recruitment 2020: 1557 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ..ನ.6ರೊಳಗೆ ಅರ್ಜಿ ಹಾಕಿ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ 1557 ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿಯ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸತಕ್ಕದ್ದು.

ಐಬಿಪಿಎಸ್ 1557 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ನವೆಂಬರ್ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು:

ವಿದ್ಯಾರ್ಹತೆ ಏನಿರಬೇಕು:

ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನವೆಂಬರ್ 6,2020ರ ಅನ್ವಯ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:

ವಯೋಮಿತಿ:

ಸೆಪ್ಟೆಂಬರ್ 1,2020ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 8 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು. ವಯೋಮಿತಿ ಸಡಿಲಿಕೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಿ.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕದ ವಿವರ:

ಅರ್ಜಿ ಶುಲ್ಕದ ವಿವರ:

ಅರ್ಜಿ ದಾರರು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳು 175/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 850/-ರೂ ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್ /ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ನ ಅಧಿಕೃತ ವೆಬ್ಸೈಟ್ https://www.ibps.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅಕ್ಟೋಬರ್ 23 ರಿಂದ ನವೆಂಬರ್ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ನೇಮಕಾತಿ 2020ರ ಪ್ರಮುಖ ದಿನಾಂಕಗಳು:

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ನೇಮಕಾತಿ 2020ರ ಪ್ರಮುಖ ದಿನಾಂಕಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಮುಂಚಿನ ಆರಂಭ ದಿನಾಂಕ: ಸೆಪ್ಟೆಂಬರ್ 2,2020
ಅರ್ಜಿ ಸಲ್ಲಿಸಲು ಈ ಮುಂಚೆ ನಿಗದಿಪಡಿಸಿದ ಕೊನೆಯ ದಿನಾಂಕ: ಸೆಪ್ಟೆಂಬರ್ 23,2020
ಅರ್ಜಿ ಸಲ್ಲಿಸಲು ಈಗ ನಿಗದಿ ಪಡಿಸಲಾದ ಆರಂಭ ದಿನಾಂಕ: ಅಕ್ಟೋಬರ್ 23,2020
ಅರ್ಜಿ ಸಲ್ಲಿಸಲು ಈಗ ನಿಗದಿಪಡಿಸಲಾದ ಕೊನೆಯ ದಿನಾಂಕ: ನವೆಂಬರ್ 6,2020
ಪೂರ್ವ ಪರೀಕ್ಷಾ ತರಬೇತಿಗೆ ಪ್ರವೇಶ ಪತ್ರ ಬಿಡುಗಡೆಯ ದಿನಾಂಕ: ನವೆಂಬರ್ 17,2020
ಪೂರ್ವ ಪರೀಕ್ಷೆ ತರಬೇತಿ ದಿನಾಂಕ: ನವೆಂಬರ್ 23 ರಿಂದ ನವೆಂಬರ್ 28,2020

ಆನ್ಲೈನ್ ಪೂರ್ವ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯ ದಿನಾಂಕ (ಪ್ರಿಲಿಮಿನರಿ ): ನವೆಂಬರ್ 18,2020

ಆನ್ಲೈನ್ ಪರೀಕ್ಷೆಯ (ಪ್ರಿಲಿಮಿನರಿ) ದಿನಾಂಕ: ಡಿಸೆಂಬರ್ 5,12,13,2020 ಆನ್ಲೈನ್ ಪರೀಕ್ಷೆಯ (ಪ್ರಿಲಿಮಿನರಿ ) ಫಲಿತಾಂಶ ಬಿಡುಗಡೆ: ಡಿಸೆಂಬರ್ 31,2020

ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ದಿನಾಂಕ: ಜನವರಿ 12,2021 ಆನ್ಲೈನ್ ಮುಖ್ಯ ಪರೀಕ್ಷೆ ದಿನಾಂಕ: ಜನವರಿ 24,2021

ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ: ಏಪ್ರಿಲ್ 1,2021

ಅಭ್ಯರ್ಥಿಗಳು ಐಬಿಪಿಎಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IBPS 2020 released notification for recruitment of 1557 clerk posts. Application date extended, Interested candidates can apply through online before November 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X