IBPS Recruitment 2021 : 5,830 ಕ್ಲರ್ಕ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ನೇಮಕಾತಿ ಅಧಿಸೂಚನೆ ರಿಲೀಸ್

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ 1557 ಕ್ಲರ್ಕ್‌ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ ಮಾಡಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿಯ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಆಗಸ್ಟ್ 1ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು:

ವಿದ್ಯಾರ್ಹತೆ ಏನಿರಬೇಕು:

ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:

ವಯೋಮಿತಿ:

ಆಗಸ್ಟ್ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 8 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು. ವಯೋಮಿತಿ ಸಡಿಲಿಕೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಿ.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕದ ವಿವರ:

ಅರ್ಜಿ ಶುಲ್ಕದ ವಿವರ:

ಅರ್ಜಿ ದಾರರು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳು 175/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 850/-ರೂ ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್ /ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ನ ಅಧಿಕೃತ ವೆಬ್ಸೈಟ್ https://www.ibps.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಜುಲೈ 12 ರಿಂದ ಆಗಸ್ಟ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ನೇಮಕಾತಿ 2021ರ ಪ್ರಮುಖ ದಿನಾಂಕಗಳು:

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ನೇಮಕಾತಿ 2021ರ ಪ್ರಮುಖ ದಿನಾಂಕಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಆರಂಭ ದಿನಾಂಕ: ಜುಲೈ 12,2021
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: ಆಗಸ್ಟ್ 1,2021
ಪೂರ್ವ ಪರೀಕ್ಷಾ ತರಬೇತಿ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ಆಗಸ್ಟ್‌ 2021
ಪೂರ್ವ ಪರೀಕ್ಷಾ ತರಬೇತಿ ದಿನಾಂಕ : ಆಗಸ್ಟ್ 16,2021 ರಿಂದ
ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ಆಗಸ್ಟ್ 2021
ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ದಿನಾಂಕಗಳು : ಆಗಸ್ಟ್ 28,29 ಮತ್ತು ಸೆಪ್ಟೆಂಬರ್ 4,2021
ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ : ಸೆಪ್ಟೆಂಬರ್/ಅಕ್ಟೋಬರ್ 2021
ಆನ್‌ಲೈನ್ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ಅಕ್ಟೋಬರ್ 2021
ಆನ್‌ಲೈನ್ ಮುಖ್ಯ ಪರೀಕ್ಷೆ ದಿನಾಂಕ : ಅಕ್ಟೋಬರ್ 31,2021

ಅಭ್ಯರ್ಥಿಗಳು ಐಬಿಪಿಎಸ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IBPS recruitment 2021 notification has been released for 5830 posts. Interested candidates can apply through online before August 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+