IBPS CRP RRB Recruitment 2021: 10,493 ಅಧಿಕಾರಿ ಮತ್ತು ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಬಿಪಿಎಸ್ 10,493 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೆನಲ್ ಸೆಲೆಕ್ಷನ್ (ಐಬಿಪಿಎಸ್) ಸಿಆರ್‌ಪಿ ಆರ್‌ಆರ್‌ಬಿ ನೇಮಕಾತಿ 2021 ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. ಐಬಿಪಿಎಸ್ ಒಟ್ಟು 10,493 ಅಧಿಕಾರಿ ಮತ್ತು ಕಚೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಐಬಿಪಿಎಸ್ ಆರ್‌ಆರ್‌ಬಿ ನೇಮಕಾತಿಯ ಈ ಹುದ್ದೆಗಳಿಗೆ ಆಸಕ್ತರು ಆನ್‌ಲೈನ್ ಮೂಲಕ ಜೂನ್ 8,2021 ರಿಂದ ಜೂನ್ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:

ಕಚೇರಿ ಸಹಾಯಕ: 5,076
ಅಧಿಕಾರಿ ಸ್ಕೇಲ್ ಇ- 4,201
ಅಧಿಕಾರಿ ಸ್ಕೇಲ್ ಈಈ - 1,060
ಅಧಿಕಾರಿ ಸ್ಕೇಲ್ ಈಈಈ -156
ಒಟ್ಟು 10,493 ಹುದ್ದೆಗಳು

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆ: ಬಿ.ಇ/ಬಿ.ಟೆಕ್: ಕಾನೂನು ಪದವಿ; ಸಿಎ; ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಐಬಿಪಿಎಸ್ ಆರ್‌ಆರ್‌ಬಿ ಅಧಿಕಾರಿ ಮತ್ತು ಕಚೇರಿ ಸಹಾಯಕ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 850/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಕೆ:

ಐಬಿಪಿಎಸ್ ಆರ್‌ಆರ್‌ಬಿ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಐಬಿಪಿಎಸ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IBPS CRP RRB recruitment 2021 notification released for 10,493 officer and office assistant posts. Interested candidates can apply through online before June 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+