IBPS CRP XI Clerk Recruitment 2021 : 5830 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ 5830 ಸಿಆರ್‌ಪಿ XI ಕ್ಲರ್ಕ್‌ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿಯ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸತಕ್ಕದ್ದು.

ಈ ಮುಂಚೆ ಐಬಿಪಿಎಸ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಜುಲೈ 12 ರಿಂದ ಆಗಸ್ಟ್ 1,2021ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಪುನಃ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್ 7,2021 ರಿಂದ ಅಕ್ಟೋಬರ್ 27,2021ರ ವರೆಗೆ ನಡೆಯಲಿದೆ. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ,ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು:

ವಿದ್ಯಾರ್ಹತೆ ಏನಿರಬೇಕು:

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:

ವಯೋಮಿತಿ:

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಜುಲೈ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು. ವಯೋಮಿತಿ ಸಡಿಲಿಕೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಿ.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ಸಂದರ್ಶನ ಸುತ್ತಿಗೆ ಹಾಜರಾಗಬೇಕಿರುತ್ತದೆ.

ಅರ್ಜಿ ಶುಲ್ಕದ ವಿವರ:

ಅರ್ಜಿ ಶುಲ್ಕದ ವಿವರ:

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 850/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸುವುದು ಹೇಗೆ:

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ನ ಅಧಿಕೃತ ವೆಬ್ಸೈಟ್ https://www.ibps.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅಕ್ಟೋಬರ್ 7,2021 ರಿಂದ ಅಕ್ಟೋಬರ್ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
ibps crp XI clerk recruitment 2021 notification has been released for 5830 posts. Interested candidates can apply before October 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+