IBPS Recruitment 2019: 1163 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ 1163 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಈ ಹುದ್ದೆಗಳ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಐಬಿಪಿಎಸ್ 1163 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿ

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 26,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು:

ವಿದ್ಯಾರ್ಹತೆ ಏನಿರಬೇಕು:

ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ,ಸ್ನಾತಕೋತ್ತರ ಪದವಿ,ಎಂಬಿಎ ಮತ್ತು ಕಾನೂನು ಪದವಿಯನ್ನು ಪಡೆದಿರಬೇಕು.

ವಯೋಮಿತಿ:

ವಯೋಮಿತಿ:

ನವೆಂಬರ್ 1,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಐಬಿಪಿಎಸ್ ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್‌ಲೈನ್‌ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್‌ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕದ ವಿವರ:

ಅರ್ಜಿ ಶುಲ್ಕದ ವಿವರ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು 100/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ನ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್‌ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ನವೆಂಬರ್ 6 ರಿಂದ ನವೆಂಬರ್ 26,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಐಬಿಪಿಎಸ್ ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿ 2019ರ ಪ್ರಮುಖ ದಿನಾಂಕಗಳು:

ಐಬಿಪಿಎಸ್ ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿ 2019ರ ಪ್ರಮುಖ ದಿನಾಂಕಗಳು:

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ನವೆಂಬರ್ 6,2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 26,2019

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ನವೆಂಬರ್ 26,2019

ಆನ್‌ಲೈನ್ ಪರೀಕ್ಷೆಯ (ಪ್ರಿಲಿಮಿನರಿ ) ಪ್ರವೇಶ ಪತ್ರ ಬಿಡುಗಡೆಯ ದಿನಾಂಕ: ಡಿಸೆಂಬರ್,2019

ಆನ್‌ಲೈನ್ ಪರೀಕ್ಷೆಯ (ಪ್ರಿಲಿಮಿನರಿ) ದಿನಾಂಕ: ಡಿಸೆಂಬರ್ 28 ಮತ್ತು 29,2019

ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ಬಿಡುಗಡೆ ದಿನಾಂಕ: ಜನವರಿ 2020

ಆನ್‌ಲೈನ್ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯ ದಿನಾಂಕ: ಜನವರಿ 2020

ಆನ್‌ಲೈನ್ ಪ್ರಮುಖ ಪರೀಕ್ಷೆಯ ದಿನಾಂಕ: ಜನವರಿ 25,2019

ಆನ್‌ಲೈನ್ ಪ್ರಮುಖ ಪರೀಕ್ಷೆಯ ಫಲಿತಾಂಶ ಬಿಡುಗಡೆ ದಿನಾಂಕ: ಫೆಬ್ರವರಿ 2020

ಸಂದರ್ಶನ ಪ್ರವೇಶ ಪತ್ರ ಬಿಡುಗಡೆ ದಿನಾಂಕ: ಫೆಬ್ರವರಿ 2020

ಸಂದರ್ಶನ ನಡೆಯುವ ದಿನಾಂಕ: ಫೆಬ್ರವರಿ 2020

ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ : ಏಪ್ರಿಲ್ 2020

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IBPS recruitment 2019 notification released in official website for the recruitment of 1163 specialist officer pots. Interested candidates can apply through online before 26th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+