IBPS Recruitment 2019: 12,075 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ನೇಮಕಾತಿಯ 12,075 ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸತಕ್ಕದ್ದು.

ಐಬಿಪಿಎಸ್ 12,075  ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಹಾಕಲು ಇಂದು ಕೊನೆಯ ದಿನ

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ,ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು :

ವಿದ್ಯಾರ್ಹತೆ ಏನಿರಬೇಕು :

ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ :

ವಯೋಮಿತಿ :

ಸೆಪ್ಟೆಂಬರ್ 1,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಯು ದಿನಾಂಕ 02-09-1991 ಗಿಂತ ಮೊದಲು ಜನಿಸಿರಬಾರದು ಮತ್ತು ದಿನಾಂಕ 01-09-1999 ನಂತರ ಜನಿಸಿರಬಾರದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 8 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು. ವಯೋಮಿತಿ ಸಡಿಲಿಕೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಿ.

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ :

ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್‌ಲೈನ್‌ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್‌ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕದ ವಿವರ:

ಅರ್ಜಿ ಶುಲ್ಕದ ವಿವರ:

ಅರ್ಜಿ ದಾರರು ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳು 100/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ :

ಅರ್ಜಿ ಸಲ್ಲಿಸುವುದು ಹೇಗೆ :

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ನ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್‌ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 9,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ನೇಮಕಾತಿ 2019ರ ಪ್ರಮುಖ ದಿನಾಂಕಗಳು :

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ನೇಮಕಾತಿ 2019ರ ಪ್ರಮುಖ ದಿನಾಂಕಗಳು :

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಸೆಪ್ಟೆಂಬರ್ 17,2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 9,2019

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 9,2019

ಪೂರ್ವ ಪರೀಕ್ಷಾ ತರಬೇತಿಗೆ ಪ್ರವೇಶ ಪತ್ರ ಬಿಡುಗಡೆಯ ದಿನಾಂಕ : ನವೆಂಬರ್ 2019

ಪೂರ್ವ ಪರೀಕ್ಷೆ ತರಬೇತಿ ದಿನಾಂಕ : ನವೆಂಬರ್ 25 ರಿಂದ ನವೆಂಬರ್ 30,2019

ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯ ದಿನಾಂಕ (ಪ್ರಿಲಿಮಿನರಿ ) : ನವೆಂಬರ್ ,2019

ಆನ್‌ಲೈನ್ ಪರೀಕ್ಷೆಯ (ಪ್ರಿಲಿಮಿನರಿ) ದಿನಾಂಕ : ಡಿಸೆಂಬರ್ 7,8,14 ಮತ್ತು 21,2019

ಆನ್‌ಲೈನ್ ಪರೀಕ್ಷಾ (ಪ್ರಿಲಿಮಿನರಿ ) ಫಲಿತಾಂಶ ಬಿಡುಗಡೆ : ಡಿಸೆಂಬರ್ 2019 / ಜನವರಿ 2020

ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ದಿನಾಂಕ : ಜನವರಿ 2020

ಆನ್‌ಲೈನ್ ಮುಖ್ಯ ಪರೀಕ್ಷೆ ದಿನಾಂಕ : ಜನವರಿ 19,2020

ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ : ಏಪ್ರಿಲ್ 2020

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IBPS recruitment 2019 notification released in official website for the recruitment of 12,075 clerk pots. Candidates can read complete details here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+