IBPS PO/MT Recruitment 2022 : 6432 ಪ್ರೊಬೆಷನರಿ ಅಧಿಕಾರಿ/ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ 6432 ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿಯ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಐಬಿಪಿಎಸ್ 2022ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟ

ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಆಗಸ್ಟ್ 2,2022 ರಿಂದ ಆಗಸ್ಟ 22,2022ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ನೇಮಕಾತಿ 2022 ವಿದ್ಯಾರ್ಹತೆ :

ಐಬಿಪಿಎಸ್ ನೇಮಕಾತಿ 2022 ವಿದ್ಯಾರ್ಹತೆ :

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಕಾಲೇಜು ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಐಬಿಪಿಎಸ್ ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಐಬಿಪಿಎಸ್ ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಖಾಲಿ ಹುದ್ದೆಗಳ ವಿವರ ಇಲ್ಲಿದೆ.

ಬ್ಯಾಂಕ್ ಆಫ್ ಇಂಡಿಯಾ : 535 ಹುದ್ದೆಗಳು
ಕೆನರಾ ಬ್ಯಾಂಕ್ : 2,500 ಹುದ್ದೆಗಳು
ಪಂಜಾಬ್ ನ್ಯಾಷನಲ್ ಬ್ಯಾಂಕ್ : 500 ಹುದ್ದೆಗಳು
ಪಂಜಾಬ್ ಮತ್ತು ಸಿಂದ್ ಬ್ಯಾಂಕ್ : 253 ಹುದ್ದೆಗಳು
ಯುಕೋ ಬ್ಯಾಂಕ್ : 550 ಹುದ್ದೆಗಳು
ಯೂನಿಯರ್ ಬ್ಯಾಂಕ್ ಆಫ್ ಇಂಡಿಯಾ : 2094 ಹುದ್ದೆಗಳು
ಒಟ್ಟು 6432 ಹುದ್ದೆಗಳು

ಐಬಿಪಿಎಸ್ ನೇಮಕಾತಿ 2022 ವಯೋಮಿತಿ :

ಐಬಿಪಿಎಸ್ ನೇಮಕಾತಿ 2022 ವಯೋಮಿತಿ :

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಗಸ್ಟ್ 1,2022ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು. ವಯೋಮಿತಿ ಸಡಿಲಿಕೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಿ.

ಐಬಿಪಿಎಸ್ ನೇಮಕಾತಿ 2022 ವೇತನ :

ಐಬಿಪಿಎಸ್ ನೇಮಕಾತಿ 2022 ವೇತನ :

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,000/- ರಿಂದ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಐಬಿಪಿಎಸ್ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಐಬಿಪಿಎಸ್ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ಸಂದರ್ಶನ ಸುತ್ತಿಗೆ ಹಾಜರಾಗಬೇಕಿರುತ್ತದೆ.

ಐಬಿಪಿಎಸ್ ನೇಮಕಾತಿ 2022 ಅರ್ಜಿ ಶುಲ್ಕ :

ಐಬಿಪಿಎಸ್ ನೇಮಕಾತಿ 2022 ಅರ್ಜಿ ಶುಲ್ಕ :

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 850/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಐಬಿಪಿಎಸ್ ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಐಬಿಪಿಎಸ್ ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ನ ಅಧಿಕೃತ ವೆಬ್ಸೈಟ್ https://www.ibps.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಆಗಸ್ಟ್ 2,2022 ರಿಂದ ಆಗಸ್ಟ್ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಐಬಿಪಿಎಸ್ ನೇಮಕಾತಿ 2022ರ ಪ್ರಮುಖ ದಿನಾಂಕಗಳು :

ಐಬಿಪಿಎಸ್ ನೇಮಕಾತಿ 2022ರ ಪ್ರಮುಖ ದಿನಾಂಕಗಳು :

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಆರಂಭ ದಿನಾಂಕ: ಆಗಸ್ಟ್ 2,2022

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: ಆಗಸ್ಟ್ 22,2022

ಪೂರ್ವ ಪರೀಕ್ಷಾ ತರಬೇತಿ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ ಮತ್ತು ಪೂರ್ವ ಪರೀಕ್ಷಾ ತರಬೇತಿ ದಿನಾಂಕ : ಸೆಪ್ಟೆಂಬರ್/ಅಕ್ಟೋಬರ್ 2022

ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ಅಕ್ಟೋಬರ್ 2022

ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ದಿನಾಂಕಗಳು : ಅಕ್ಟೋಬರ್ 2022

ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ದಿನಾಂಕ : ನವೆಂಬರ್ 2022

ಆನ್‌ಲೈನ್ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ನವೆಂಬರ್ 2022

ಆನ್‌ಲೈನ್ ಮುಖ್ಯ ಪರೀಕ್ಷೆ ದಿನಾಂಕ : ನವೆಂಬರ್ 2022

ಆನ್‌ಲೈನ್ ಮುಖ್ಯ ಪರೀಕ್ಷೆ ಫಲಿತಾಂಶ ದಿನಾಂಕ : ಡಿಸೆಂಬರ್ 2022

ಸಂದರ್ಶನ ಪ್ರವೇಶ ಪತ್ರ ಮತ್ತು ಸಂದರ್ಶನ ನಡೆಯುವ ದಿನಾಂಕ : ಜನವರಿ/ಫೆಬ್ರವರಿ 2023

ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ ದಿನಾಂಕ : ಏಪ್ರಿಲ್ 2023

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IBPS recruitment 2022 notification has been released for 6432 probationary officer/management trainee posts. Interested candidates can apply before August 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X