ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ಬೋರ್ಡ್ 710 ತಜ್ಞ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ ಮಾಡಿದೆ. ಆಸಕ್ತರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿಯ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ನವೆಂಬರ್ 1,2022 ರಿಂದ ನವೆಂಬರ್ 21,2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ಮುಂದೆ ಓದಿ.
IBPS ನೇಮಕಾತಿ 2022 ವಿದ್ಯಾರ್ಹತೆ ಏನಿರಬೇಕು :
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನೇಮಕಾತಿಯ ತಜ್ಞ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪದವಿ, ಕಾನೂನು ಪದವಿ, ಎಲ್‌ಎಲ್‌ಬಿ, ಎಂಬಿಎ ವಿದ್ಯಾರ್ಹತೆಯನ್ನು ಪಡೆದಿರಬೇಕು.
IBPS ನೇಮಕಾತಿ 2022 ವಯೋಮಿತಿ :
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನೇಮಕಾತಿಯ ತಜ್ಞ ಅಧಿಕಾರಿ ಹುದ್ದೆಗಳಿಗೆ ನವೆಂಬರ್ 1,2022ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು. ವಯೋಮಿತಿ ಸಡಿಲಿಕೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಿ.
IBPS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನೇಮಕಾತಿಯ ತಜ್ಞ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
IBPS ನೇಮಕಾತಿ 2022 ಅರ್ಜಿ ಶುಲ್ಕದ ವಿವರ :
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನೇಮಕಾತಿಯ ತಜ್ಞ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳು 175/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 850/-ರೂ ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್ /ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕಿರುತ್ತದೆ.
IBPS ನೇಮಕಾತಿ 2022 ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-11-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 21-ನವೆಂಬರ್-2022
ಆನ್‌ಲೈನ್ ಪರೀಕ್ಷೆಯ ದಿನಾಂಕ - ಪೂರ್ವಭಾವಿ: 24ನೇ ಡಿಸೆಂಬರ್ 2022/31ನೇ ಡಿಸೆಂಬರ್ 2022
ಆನ್‌ಲೈನ್ ಪರೀಕ್ಷೆಯ ಫಲಿತಾಂಶದ ದಿನಾಂಕ - ಪೂರ್ವಭಾವಿ: ಜನವರಿ-2023
ಆನ್‌ಲೈನ್ ಪರೀಕ್ಷೆಗಾಗಿ ಕರೆ ಪತ್ರದ ಡೌನ್‌ಲೋಡ್ ದಿನಾಂಕ - ಮುಖ್ಯ: ಜನವರಿ-2023
ಆನ್‌ಲೈನ್ ಪರೀಕ್ಷೆಯ ದಿನಾಂಕ - ಮುಖ್ಯ: 29-ಜನವರಿ-2023
ಆನ್‌ಲೈನ್ ಮುಖ್ಯ ಪರೀಕ್ಷೆಯ ಫಲಿತಾಂಶದ ಘೋಷಣೆಯ ದಿನಾಂಕ: ಫೆಬ್ರವರಿ-2023
ಸಂದರ್ಶನಕ್ಕಾಗಿ ಕರೆ ಪತ್ರಗಳ ಡೌನ್‌ಲೋಡ್ ದಿನಾಂಕ: ಫೆಬ್ರವರಿ-2023
ಸಂದರ್ಶನದ ದಿನಾಂಕ: ಫೆಬ್ರವರಿ/ಮಾರ್ಚ್-2023
ತಾತ್ಕಾಲಿಕ ಹಂಚಿಕೆಯ ದಿನಾಂಕ: ಎಪ್ರಿಲ್-2023
IBPS ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ನ ಅಧಿಕೃತ ವೆಬ್ಸೈಟ್ https://www.ibps.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ತದನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ನವೆಂಬರ್ ನವೆಂಬರ್ 1,2022 ರಿಂದ ನವೆಂಬರ್ 21,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.
ಐಬಿಪಿಎಸ್ ನೇಮಕಾತಿಯ ತಜ್ಞ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











