ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ಬೋರ್ಡ್ 8106 ಅಧಿಕಾರಿ ಮತ್ತು ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ ಮಾಡಿದೆ. ಆಸಕ್ತರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿಯ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಜೂನ್ 7,2022 ರಿಂದ ಜೂನ್ 27,2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ ಏನಿರಬೇಕು:
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನೇಮಕಾತಿಯ ಅಧಿಕಾರಿ ಮತ್ತು ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಪದವಿ, ಸಿಎ, ಎಂಬಿಎ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ:
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನೇಮಕಾತಿಯ ಅಧಿಕಾರಿ ಮತ್ತು ಕಚೇರಿ ಸಹಾಯಕ
ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು. ವಯೋಮಿತಿ ಸಡಿಲಿಕೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಿ.
ಆಯ್ಕೆ ಪ್ರಕ್ರಿಯೆ:
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನೇಮಕಾತಿಯ ಅಧಿಕಾರಿ ಮತ್ತು ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕದ ವಿವರ:
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳು 175/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 850/-ರೂ ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್ /ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ನ ಅಧಿಕೃತ ವೆಬ್ಸೈಟ್ https://www.ibps.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ತದನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ನವೆಂಬರ್ ಜೂನ್ 7,2022 ರಿಂದ ಜೂನ್ 27,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.
ಐಬಿಪಿಎಸ್ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.