IBPS RRB 2020: ಗ್ರೂಪ್ ಎ ಮತ್ತು ಗ್ರೂಪ್ ಬಿ ಅಧಿಕಾರ ಹುದ್ದೆಗಳ ಅಧಿಸೂಚನೆ ಪ್ರಕಟ

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಆರ್‌ಆರ್‌ಬಿ 2020ರ ನೇಮಕಾತಿಯ ಗ್ರೂಪ್ ಎ ಮತ್ತು ಗ್ರೂಪ್ ಬಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 21,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ಆರ್‌ಆರ್‌ಬಿ 2020ರ ಅಧಿಸೂಚನೆ ರಿಲೀಸ್..ಜು.21ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಐಬಿಪಿಎಸ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಜುಲೈ 1,2020ರ ಅನ್ವಯ ಪದವಿ, ಕಾನೂನು ಪದವಿ, ಚಾರ್ಟೆಡ್ ಅಕೌಂಟೆಂಟ್ ಅಥವಾ ಎಂಬಿಎ, ಕೃಷಿ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜುಲೈ 1,2020ರ ಅನ್ವಯ ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ, ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 32 ವರ್ಷ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 850/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜುಲೈ 21,2020ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 21,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ: ಜುಲೈ 1,2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 21,2020
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಜುಲೈ 21,2020
ಪರೀಕ್ಷಾ ಪೂರ್ವ ತರಬೇತಿಗೆ ಪ್ರವೇಶ ಪತ್ರ ಪಡೆಯುವ ದಿನಾಂಕ: ಆಗಸ್ಟ್ 12,2020
ಪರೀಕ್ಷಾ ಪೂರ್ವ ತರಬೇತಿ ದಿನಾಂಕ: ಆಗಸ್ಟ್ 24 ರಿಂದ ಆಗಸ್ಟ್ 29,2020
ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಪಡೆಯುವ ದಿನಾಂಕ: ಆಗಸ್ಟ್,2020
ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ದಿನಾಂಕ: ಸೆಪ್ಟೆಂಬರ್/ಅಕ್ಟೋಬರ್ 2020
ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ: ಅಕ್ಟೋಬರ್ 2020
ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಪಡೆಯುವ ದಿನಾಂಕ: ಅಕ್ಟೋಬರ್/ನವೆಂಬರ್ 2020
ಆನ್‌ಲೈನ್ ಪ್ರಮುಖ ಪರೀಕ್ಷೆ ದಿನಾಂಕ: ಅಕ್ಟೋಬರ್/ನವೆಂಬರ್ 2020
ಆನ್‌ಲೈನ್ ಪ್ರಮುಖ ಪರೀಕ್ಷೆ ಫಲಿತಾಂಶ ದಿನಾಂಕ: ಅಕ್ಟೋಬರ್/ನವೆಂಬರ್ 2020
ಸಂದರ್ಶನ ಪ್ರವೇಶ ಪತ್ರ ಪಡೆಯುವ ದಿನಾಂಕ: ಅಕ್ಟೋಬರ್/ನವೆಂಬರ್ 2020
ಸಂದರ್ಶನ ನಡೆಯುವ ದಿನಾಂಕ: ಅಕ್ಟೋಬರ್/ನವೆಂಬರ್ 2020
ಸೀಟು ಹಂಚಿಕೆ ದಿನಾಂಕ: ಜನವರಿ 2021

ಅಭ್ಯರ್ಥಿಗಳು ಐಬಿಪಿಎಸ್ ಆರ್‌ಆರ್‌ಬಿ 2020 ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IBPS RRB 2020 recruitment notification has been released. Interested candidates can apply through online before July 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+