ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ ಮತ್ತು ಎಜುಕೇಶನ್ (ಐಸಿಎಫ್ಆರ್ಇ) 2 ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ:
ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ಜೂನ್ 1,2021ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಪ.ಜಾತಿ/ಪ.ಪಂಗಡ/ಮಹಿಳೆ/ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ:
ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂಧಿಗೆ ಫೆಬ್ರವರಿ 8,2021ರಂದು ಬೆಳಿಗ್ಗೆ 10:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ:
Institute of wood science and technology,
P.O. malleshwaram,
Bangalore-560003.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











