ಐಸಿಎಂಆರ್- ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾವಿಜ್ಞಾನ ಸಂಸ್ಥೆಯಲ್ಲಿ 5 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:
ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್ ಪದವಿ, ಪಿಹೆಚ್.ಡಿ, 12ನೇ ತರಗತಿ, 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ವಯೋಮಿತಿ:
ಮೇ 11,2021ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,000/- ರಿಂದ 48,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಆಗದ ಅಭ್ಯರ್ಥಿಗಳು ಅರ್ಜಿಯನ್ನು [email protected] ವಿಳಾಸಕ್ಕೆ ಮೇ 10,2021ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











