ICMR Recruitment 2020: 80 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) 80 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 3,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಐಸಿಎಂಆರ್ ನಲ್ಲಿ 80 ಸಹಾಯಕ ಹುದ್ದೆಗಳ ನೇಮಕಾತಿ...ಡಿ.3ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಡಿಸೆಂಬರ್ 3,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಯೋಮಿತಿ ಸಡಿಲಿಕೆಯ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನ:

ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,12,400/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 1,500/-ರೂ ಮತ್ತು ಪ.ಜಾ/ಪ.ಪಂ/ಓಬಿಸಿ ಅಭ್ಯರ್ಥಿಗಳು 1,200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.icmr.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 3,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
ICMR recruitment 2020 notification has been released for 80 assistant posts. Interested candidates can apply through online before December 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X