ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) 11 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಪದವಿ ಅಥವಾ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 44,900/- ರಿಂದ 1,77,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.icmr.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 26,2021ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Assistant Director General (Administration (I), Indian council of medical research,
Ramalingaswami bhawan, Ansari nagar,
Post box-4911,
New delhi-11029.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.