ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಬ್ಯಾಂಕ್ ನೇಮಕಾತಿ 40 ಡೆಪ್ಯುಟಿ ಜನರಲ್ ಮ್ಯಾನೇಜರ್ , ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಐಡಿಬಿಐ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಏಪ್ರಿಲ್ 14,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಡೆಪ್ಯುಟಿ ಜನರಲ್ ಮ್ಯಾನೇಜರ್ (ಡಿಜಿಎಂ), ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಎಜಿಎಂ),ಮ್ಯಾನೇಜರ್ |
| Organisation | ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ ಬ್ಯಾಂಕ್) |
| Educational Qualification | ಪದವಿ / ಸ್ನಾತಕೋತ್ತರ ಪದವಿ |
| Job Location | ಭಾರತದೆಲ್ಲೆಡೆ |
| Salary Scale | ಡೆಪ್ಯುಟಿ ಜನರಲ್ ಮ್ಯಾನೇಜರ್-ತಿಂಗಳಿಗೆ 33,600/-ರಿಂದ 53,900/-ರೂ, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಎಜಿಎಂ) -ತಿಂಗಳಿಗೆ 42,020/- ರಿಂದ 51,490/- ರೂ ಮತ್ತು ಮ್ಯಾನೇಜರ್ ಹುದ್ದೆಗಳಿಗೆ - ತಿಂಗಳಿಗೆ 31,705/- ರಿಂದ 45,950/-ರೂ |
| Application Start Date | March 14, 2019 |
| Application End Date | April 14, 2019 |
ವಿದ್ಯಾರ್ಹತೆ:
ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಪದವಿ ಅಥವಾ ಸ್ನಾತಕೋತ್ತರ ಪದವಿ ಮತ್ತು ಎಂಬಿಎ , ಐಸಿಡಬ್ಲ್ಯೂಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮ್ಯಾನೇಜರ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಪದವಿ ಅಥವಾ ಸ್ನಾತಕೋತ್ತರ ಪದವಿ, ಎಂಬಿಎ, ಐಸಿಡಬ್ಲ್ಯೂಎ, ಸಿಎ / ಸಿಎಫ್‌ಎ ,ಎಂಎ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಖಾಲಿ ಹುದ್ದೆಗಳ ವಿವರ:
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಡೆಪ್ಯುಟಿ ಜನರಲ್ ಮ್ಯಾನೇಜರ್ (ಡಿಜಿಎಂ) | 3 |
| ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಎಜಿಎಂ) | 5 |
| ಮ್ಯಾನೇಜರ್ | 32 |
| ಒಟ್ಟು | 40 |
ವಯೋಮಿತಿ:
ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ 35 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಎಜಿಎಂ) ಹುದ್ದೆಗಳಿಗೆ 28 ರಿಂದ 36 ವರ್ಷದೊಳಗಿನ ಅಭ್ಯರ್ಥಿಗಳು ಮತ್ತು ಮ್ಯಾನೇಜರ್ ಹುದ್ದೆಗಳಿಗೆ 25 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,600/-ರಿಂದ 53,900/-ರೂ, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಎಜಿಎಂ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,020/- ರಿಂದ 51,490/- ರೂ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಗುಂಪು ಚರ್ಚೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 150/-ರೂ ಮತ್ತು ಉಳಿದ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಐಡಿಬಿಐ ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಏಪ್ರಿಲ್ 14,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಐಡಿಬಿಐ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











