ಐಡಿಬಿಐ ಬ್ಯಾಂಕ್ ನೇಮಕಾತಿ 600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಬ್ಯಾಂಕ್ ನೇಮಕಾತಿ 600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜುಲೈ 7,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಡಿಬಿಐ ಬ್ಯಾಂಕ್ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಸಿಸ್ಟೆಂಟ್ ಮ್ಯಾನೇಜರ್
Organisation ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ ಬ್ಯಾಂಕ್)
Educational Qualification ಪದವಿ
Job Location ಭಾರತದೆಲ್ಲೆಡೆ
Application Start Date June 24, 2019
Application End Date July 7, 2019

ವಿದ್ಯಾರ್ಹತೆ:

ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:

ಜೂನ್ 1,2019ರ ಅನ್ವಯ ಅಸಿಸ್ಟೆಂಟ್ ಮ್ಯಾನೇಜರ್ (ಎಎಂ) ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 28 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ತರಬೇತಿಯ ವಿವರ:

ಅರ್ಹ ಅಭ್ಯರ್ಥಿಗಳನ್ನು ಬೆಂಗಳೂರಿನ 'ಮಣಿಪಾಲ್‌ ಗ್ಲೋಬಲ್‌ ಎಜುಕೇಶನ್‌ ಸರ್ವೀ‍ಸಸ್‌ ಪ್ರೈವೆಟ್‌ ಲಿಮಿಟೆಡ್‌ನಲ್ಲಿ' ನೀಡಲಾಗುವ 'ಬ್ಯಾಂಕಿಂಗ್‌ ಮತ್ತು ಫೈನಾನ್ಸ್‌' ಎಂಬ ಒಂದು ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗೆ ಆಯ್ಕೆ ಮಾಡುತ್ತದೆ. ಈ ಕೋರ್ಸನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರನ್ನು ಮಾತ್ರ 'ಎ' ಗ್ರೇಡ್‌ನ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗೆ ನೇಮಿಸಿಕೊಳ್ಳಲಾಗುತ್ತದೆ. ಜುಲೈ 27ರಂದು ಆನ್‌ಲೈನ್‌ ಪರೀಕ್ಷೆ ನಡೆಯಲಿದ್ದು, ಇದರಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಈ ಕೋರ್ಸ್‌ಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 150/-ರೂ ಮತ್ತು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಐಡಿಬಿಐ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 7,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
IDBI Bank Recruitment 2019-20: Apply Online for 600 Assistant Manager Vacancies. IDBI Bank Manipal School of Banking (IDBI Bank) invited Online applications from eligible and interested candidates to fill up Assistant Manager Posts through IDBI Bank official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+