IDBI Bank Recruitment 2020: 134 ವಿಶೇಷ ಕೇಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯ (ಐಡಿಬಿಐ) 134 ಸ್ಪೆಷಲಿಸ್ಟ್ ಕೇಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಐಡಿಬಿಐ ಬ್ಯಾಂಕ್ ನಲ್ಲಿ 134 ಹುದ್ದೆಗಳ ನೇಮಕಾತಿ..ಜ.7ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ/ಪಿಜಿಡಿಎಂ/ಪಿಜಿಡಿಬಿಎ, ಬಿಎಸ್ಸಿ, ಬಿ.ಕಾಂ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 1,2020ರ ಅನ್ವಯ ಡಿಜಿಎಂ ಹುದ್ದೆಗಳಿಗೆ ಕನಿಷ್ಟ 35 ರಿಂದ ಗರಿಷ್ಟ 40 ವರ್ಷ, ಎಜಿಎಂ ಹುದ್ದೆಗಳಿಗೆ ಕನಿಷ್ಟ 28 ರಿಂದ ಗರಿಷ್ಟ 40 ವರ್ಷ, ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಡಿಜಿಎಂ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,030/- ರಿಂದ 59,170/-ರೂ, ಎಜಿಎಂ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,020/- ರಿಂದ 51,490/- ರೂ, ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700/- ರಿಂದ 42,020/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 700/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.idbibank.in/index.asp ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IDBI recruitment 2020 notification has been released for 134 specialist cadre posts. Interested candidates can apply through online before January 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X