
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆ.ಫ್ ಇಂಡಿಯಾ (ಐಡಿಬಿಐ) ನಲ್ಲಿಅವಶ್ಯವಿರುವ 650 ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಐಡಿಬಿಐ ಗ್ರೇಡ್ ಎ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಐಡಿಬಿಐ ಬ್ಯಾಂಕ್ ನಡೆಸುವ ಪಿಜಿಡಿಬಿಎಫ್ ಕೋರ್ಸ್ ಮೂಲಕ ಆಯ್ಕೆ ಮಾಡಲಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 22,2021ರೊಳಗೆ ಅರ್ಜಿಯನ್ನು ಹಾಕಬಹುದು.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಜುಲೈ 1,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಐಡಿಬಿಐ ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳನ್ನು ಸೆಪ್ಟೆಂಬರ್ 4ರಂದು ನಡೆಯುವ ಆನ್‌ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 1000/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಐಡಿಬಿಐ ಅಧಿಕೃತ ವೆಬ್‌ಸೈಟ್ https://www.idbibank.in/index.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











