IDBI Recruitment 2021 : 920 ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಡಿಬಿಐ ನಲ್ಲಿ 920 ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿ

ಇಂಡಸ್ಟ್ರಿಯಲ್ ಡೆವಲಪ್ಮೆಂಟ್‌ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ನಲ್ಲಿಅವಶ್ಯವಿರುವ 920 ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಇರುವ ಶಾಖೆಗಳಲ್ಲಿ ನೇಮಕಾತಿ ನಡೆಯುತ್ತಿದ್ದು, ಒಟ್ಟು 920 ಹುದ್ದೆಗಳಿಗೆ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 18ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ :

ವಿದ್ಯಾರ್ಹತೆ :

ಐಡಿಬಿಐ ಬ್ಯಾಂಕ್ ನೇಮಕಾತಿಯ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ :

ವಯೋಮಿತಿ :

ಜುಲೈ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ/ಪ.ಪಂ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ವೇತನ :

ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಅರ್ಜಿ ಶುಲ್ಕ :

ಅರ್ಜಿದಾರರು 1000/-ರೂ ಮತ್ತು ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಶುಲ್ಕ ಪಾವತಿಸಲು ಆಗಸ್ಟ್‌ 18 ಕೊನೆಯ ದಿನವಾಗಿರುತ್ತದೆ.

ಆಯ್ಕೆ ವಿಧಾನ :

ಆಯ್ಕೆ ವಿಧಾನ :

ಐಡಿಬಿಐ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್-ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆನ್‌ಲೈನ್ ಪರೀಕ್ಷೆಯನ್ನು ಸೆಪ್ಟೆಂಬರ್ 5ರಂದು ನಡೆಸಲಾಗುತ್ತಿದೆ.

ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಆಗಸ್ಟ್ 4,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 18,2021
ಆನ್‌ಲೈನ್ ಪರೀಕ್ಷೆ ನಡೆಯುವ ದಿನಾಂಕ : ಸೆಪ್ಟೆಂಬರ್ 5,2021

ಅರ್ಜಿ ಸಲ್ಲಿಕೆ :

ಅರ್ಜಿ ಸಲ್ಲಿಕೆ :

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://idbibank.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 18,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IDBI recruitment 2021 notification has been released for 920 executive posts. Interested candidates can apply before August 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+