IDBI Recruitment 2022 : 226 ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಸ್ಟ್ರಿಯಲ್ ಡೆವಲಪ್ಮೆಂಟ್‌ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ನಲ್ಲಿಅವಶ್ಯವಿರುವ 226 ವ್ಯವಸ್ಥಾಪಕ, ಸಹಾಯಕ ಸಾಮಾನ್ಯ ವ್ಯವಸ್ಥಾಪಕ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಇರುವ ಶಾಖೆಗಳಲ್ಲಿ ನೇಮಕಾತಿ ನಡೆಯುತ್ತಿದ್ದು, ಒಟ್ಟು 226 ಹುದ್ದೆಗಳಿಗೆ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 25 ರಿಂದ ಜುಲೈ 10,2022ರೊಳಗೆ ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ಐಡಿಬಿಐ ನಲ್ಲಿ 226 ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ :

ಐಡಿಬಿಐ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ, ಸಹಾಯಕ ಸಾಮಾನ್ಯ ವ್ಯವಸ್ಥಾಪಕ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಬಿ.ಎಸ್ಸಿ, ಬಿ.ಇ/ಬಿ.ಟೆಕ, ಕಾನೂನು ಪದವಿ, ಎಂಸಿಎ, ಎಂಎಸ್ಸಿ ಮತ್ತು ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ :

ಐಡಿಬಿಐ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ, ಸಹಾಯಕ ಸಾಮಾನ್ಯ ವ್ಯವಸ್ಥಾಪಕ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ/ಪ.ಪಂ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಐಡಿಬಿಐ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ, ಸಹಾಯಕ ಸಾಮಾನ್ಯ ವ್ಯವಸ್ಥಾಪಕ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,170/- ರಿಂದ 89,890/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಐಡಿಬಿಐ ನಲ್ಲಿ 226 ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ

ಅರ್ಜಿ ಶುಲ್ಕ :

ಐಡಿಬಿಐ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ, ಸಹಾಯಕ ಸಾಮಾನ್ಯ ವ್ಯವಸ್ಥಾಪಕ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1000/-ರೂ ಮತ್ತು ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಶುಲ್ಕ ಪಾವತಿಸಲು ಜುಲೈ 10,2022 ಕೊನೆಯ ದಿನವಾಗಿರುತ್ತದೆ.

ಆಯ್ಕೆ ವಿಧಾನ :

ಐಡಿಬಿಐ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ, ಸಹಾಯಕ ಸಾಮಾನ್ಯ ವ್ಯವಸ್ಥಾಪಕ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್-ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆ :

ಐಡಿಬಿಐ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ, ಸಹಾಯಕ ಸಾಮಾನ್ಯ ವ್ಯವಸ್ಥಾಪಕ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://idbibank.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸುವ ಮೂಲಕ ಜೂನ್ 25 ರಿಂದ ಜುಲೈ 10,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IDBI recruitment 2022 notification has been released for 226 manager, assistant and deputy general manager posts. Apply online before July 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+