ಭಾರತ ಸರ್ಕಾರದ ಮಿಂಟ್ ಕೋಲ್ಕತ್ತಾದಲ್ಲಿ 7 ಕೆತ್ತನೆಗಾರ ಮತ್ತು ಕಿರಿಯ ಕಚೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 7,2022 ರಿಂದ ಜೂನ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

IGM kolkata ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :
ಭಾರತ ಸರ್ಕಾರದ ಮಿಂಟ್ ಕೋಲ್ಕತ್ತಾ ನೇಮಕಾತಿಯ ಕೆತ್ತನೆಗಾರ ಮತ್ತು ಕಿರಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
IGM kolkata ನೇಮಕಾತಿ 2022 ವಯೋಮಿತಿ :
ಭಾರತ ಸರ್ಕಾರದ ಮಿಂಟ್ ಕೋಲ್ಕತ್ತಾ ನೇಮಕಾತಿಯ ಕೆತ್ತನೆಗಾರ ಮತ್ತು ಕಿರಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜೂನ್ 7,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
IGM kolkata ನೇಮಕಾತಿ 2022 ವೇತನ :
ಭಾರತ ಸರ್ಕಾರದ ಮಿಂಟ್ ಕೋಲ್ಕತ್ತಾ ನೇಮಕಾತಿಯ ಕೆತ್ತನೆಗಾರ ಮತ್ತು ಕಿರಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,540/- ರಿಂದ 85,570/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

IGM kolkata ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಭಾರತ ಸರ್ಕಾರದ ಮಿಂಟ್ ಕೋಲ್ಕತ್ತಾ ನೇಮಕಾತಿಯ ಕೆತ್ತನೆಗಾರ ಮತ್ತು ಕಿರಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
IGM kolkata ನೇಮಕಾತಿ 2022 ಅರ್ಜಿ ಶುಲ್ಕ :
ಭಾರತ ಸರ್ಕಾರದ ಮಿಂಟ್ ಕೋಲ್ಕತ್ತಾ ನೇಮಕಾತಿಯ ಕೆತ್ತನೆಗಾರ ಮತ್ತು ಕಿರಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
IGM kolkata ನೇಮಕಾತಿ 2022 ಅರ್ಜಿ ಸಲ್ಲಿಕೆ :
ಭಾರತ ಸರ್ಕಾರದ ಮಿಂಟ್ ಕೋಲ್ಕತ್ತಾ ನೇಮಕಾತಿಯ ಕೆತ್ತನೆಗಾರ ಮತ್ತು ಕಿರಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://igmkolkata.spmcil.com/Interface/Home.aspx ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 7,2022 ರಿಂದ ಜೂನ್ 7,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











