ನೊಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಬ್ಯಾಕ್‌ಲಾಗ್ ಗ್ರೂಪ್-ಡಿ (ಜವಾನರ) ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳು ಫೆಬ್ರವರಿ 17,2022 ರಿಂದ ಮಾರ್ಚ್ 31,2022ರ ಸಂಜೆ 5:30 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

IGR ನೇಮಕಾತಿ 2022 ವಿದ್ಯಾರ್ಹತೆ :
ನೊಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿಯ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೆಕು.
IGR ನೇಮಕಾತಿ 2022 ವಯೋಮಿತಿ :
ನೊಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿಯ ಜವಾನ ಹುದ್ದೆಗೆ ಫೆಬ್ರವರಿ 14,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
IGR ನೇಮಕಾತಿ 2022 ವೇತನ :
ನೊಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿಯ ಜವಾನ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 17,000/- ರಿಂದ 28,950/-ರೂ ವೇತನವನ್ನು ನೀಡಲಾಗುವುದು.
IGR ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ನೊಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿಯ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
IGR ನೇಮಕಾತಿ 2022 ಅರ್ಜಿ ಶುಲ್ಕ :
ನೊಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿಯ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.
IGR ನೇಮಕಾತಿ 2022 ಅರ್ಜಿ ಸಲ್ಲಿಕೆ :
ನೊಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿಯ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://igr.karnataka.gov.in/ ಗೆ ಭೇಟಿ ನಿಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 17,2022 ರಿಂದ ಮಾರ್ಚ್ 31,2022ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕು.
ಕಚೇರಿ ವಿಳಾಸ :
Registration Superintendent & Printers Commissioner Office, Kandaya Bhavan, 08th Floor, K.G Road, Bengaluru - 560009
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.