IIIT Bangalore Recruitment 2022 : 4 ರಿಸರ್ಚ್ ಅಸೋಸಿಯೇಟ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ 4 ರಿಸರ್ಚ್ ಅಸೋಸಿಯೇಟ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಬೆಂಗಳೂರು ಮತ್ತು ದೆಹಲಿಯಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 4,2022 ರಿಂದ ಫೆಬ್ರವರಿ 15,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

IIIT ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅನುಭವ :

ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ರಿಸರ್ಚ್ ಅಸೋಸಿಯೇಟ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಎಂ.ಟೆಕ್, ಎಂ.ಎಸ್, ಪಿಹೆಚ್‌.ಡಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಮತ್ತು ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

IIIT ನೇಮಕಾತಿ 2022 ವಯೋಮಿತಿ :

ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ರಿಸರ್ಚ್ ಅಸೋಸಿಯೇಟ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

IIIT ನೇಮಕಾತಿ 2022 ವೇತನದ ವಿವರ :

ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 6,50,000/- ರಿಂದ 9,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಐಐಐಟಿ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

IIIT ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ರಿಸರ್ಚ್ ಅಸೋಸಿಯೇಟ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

IIIT ನೇಮಕಾತಿ 2022 ಅರ್ಜಿ ಶುಲ್ಕ :

ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ರಿಸರ್ಚ್ ಅಸೋಸಿಯೇಟ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

IIIT ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ರಿಸರ್ಚ್ ಅಸೋಸಿಯೇಟ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ. ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ [email protected] ವಿಳಾಸಕ್ಕೆ ಫೆಬ್ರವರಿ 15,2022ರೊಳಗೆ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ[email protected] ವಿಳಾಸಕ್ಕೆ ಫೆಬ್ರವರಿ 10,2022ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಹಾಕಬಹುದು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://www.iiitb.ac.in/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IIIT bangalore recruitment 2022 notification has been released for 4 research associate and research assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X