ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (ಐಐಎಂಬಿ) ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಸ್ಟೈಫೆಂಡ್:
ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 36,000/-ರೂ ಗಳ ವರೆಗೆ ಸ್ಟೈಫೆಂಡ್ ಅನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.iimb.ac.in/home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.