ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಹಿರಿಯ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಫೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಪಿಜಿ ಡಿಪ್ಲೋಮಾ, ಎಂಬಿಎ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 45 ರಿಂದ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.iimb.ac.in/home
ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











