IISc Recruitment 2020: 8 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು ಇಲ್ಲಿ 8 ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಐಎಸ್ಸಿ ಯಲ್ಲಿ ಉದ್ಯೋಗಾವಕಾಶ...ಡಿ.10ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ:

ಡಿಸೆಂಬರ್ 10,2020ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.iisc.ac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಡಿಸೆಂಬರ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
IISc recruitment 2020 notification released for 8 non teaching posts. Interested candidates can apply through online before December 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X