ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು ಇಲ್ಲಿ ಪ್ರಾಜೆಕ್ಟ್ ಲೀಡ್ ಮತ್ತು ಡಿಸೈನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 21,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಎಂ.ಇ/ಎಂ.ಟೆಕ್, ಪಿಹೆಚ್,ಡಿ ಮತ್ತು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ:
ಐಐಎಸ್ಸಿ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ಪ್ರಾಜೆಕ್ಟ್ ಲೀಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 87,000/- ರಿಂದ 1,86,000/-ರೂ ಮತ್ತು ಡಿಸೈನರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 38,440/- 96,720/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.iisc.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 21,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











