IISC Recruitment 2022 : 100 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ವಿಜ್ಞಾನ ಸಂಸ್ಥೆ (IISC), ಸಾರ್ವಜನಿಕ ಸಂಶೋಧನಾ ವಿಶ್ವವಿದ್ಯಾಲಯವು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 100 ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಬೆಂಗಳೂರಿನಲ್ಲಿ ಪೂರ್ಣ ಸಮಯದ ಆಧಾರ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 7,2022 ರಿಂದ ಫೆಬ್ರವರಿ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 100 ಹುದ್ದೆಗಳ ನೇಮಕಾತಿ

IISC ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತೀಯ ವಿಜ್ಞಾನ ಸಂಸ್ಥೆ (IISC) ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಬಿ.ಇ, ಬಿ.ಟೆಕ್, ಬಿ.ಆರ್ಕಿ, ಬಿ.ಎಸ್ಸಿ, ಬಿಸಿಎ, ಬಿ.ವಿಎಸ್ಸಿ ವಿದ್ಯಾರ್ಹತೆಯನ್ನು ಶೇ.55ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

IISC ನೇಮಕಾತಿ 2022 ವಯೋಮಿತಿ :

ಭಾರತೀಯ ವಿಜ್ಞಾನ ಸಂಸ್ಥೆ (IISC) ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಫೆಬ್ರವರಿ 28,2022ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

IISC ನೇಮಕಾತಿ 2022 ವೇತನದ ವಿವರ :

ಭಾರತೀಯ ವಿಜ್ಞಾನ ಸಂಸ್ಥೆ (IISC) ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.

IISC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ವಿಜ್ಞಾನ ಸಂಸ್ಥೆ (IISC) ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

IISC ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ವಿಜ್ಞಾನ ಸಂಸ್ಥೆ (IISC) ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಸಾಮಾನ್ಯ, ಒಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಮಹಿಳೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಟ್ರಾನ್ಸ್‌ಜೆಂಡರ್ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 100 ಹುದ್ದೆಗಳ ನೇಮಕಾತಿ

IISC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ವಿಜ್ಞಾನ ಸಂಸ್ಥೆ (IISC) ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://iisc.ac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 7,2022 ರಿಂದ ಫೆಬ್ರವರಿ 28,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IISC recruitment 2022 notification has been released for 100 technical assistant Posts. Interested candidates can apply before February 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+