ಕರ್ನಾಟಕದ ಐಐಎಸ್ಸಿ ಯಲ್ಲಿ 24 ಸೆಕ್ಯುರಿಟಿ ಅಸಿಸ್ಟೆಂಟ್ ನೇಮಕಾತಿ

Posted By:

ಕರ್ನಾಟಕದ ಇಂಡಿಯನ್ ಇನ್ಸ್ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಖಾಲಿ ಇರುವ ಸೆಕ್ಯೂರಿಟಿ ಅಸಿಸ್ಟೆಂಟ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 24 ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ 21 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಐಐಎಸ್ಸಿ ಯಲ್ಲಿ  ಸೆಕ್ಯುರಿಟಿ ಅಸಿಸ್ಟೆಂಟ್ ನೇಮಕಾತಿ

ಹುದ್ದೆಗಳ ವಿವರ

ಸೆಕ್ಯೂರಿಟಿ ಅಸಿಸ್ಟೆಂಟ್ (24)

  • ಸಾಮಾನ್ಯ-10
  • ಒಬಿಸಿ- 06+03 (ಬ್ಯಾಕ್ಲಾಗ್)
  • ಎಸ್.ಸಿ- 03
  • ಎಸ್.ಟಿ- 01+01 (ಬ್ಯಾಕ್ಲಾಗ್)

ವಿದ್ಯಾರ್ಹತೆ: ಸೆಕ್ಯೂರಿಟಿ ಅಸಿಸ್ಟೆಂಟ್ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪೂರ್ಣಗೊಳಿಸಿರಬೇಕು. ಮತ್ತು ಕನಿಷ್ಠ 15 ವರ್ಷಗಳ ಕಾಲ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿರಬೇಕು. ದ್ವಿಚಕ್ರ ವಾಹನದ ಪರವಾನಿಗೆ ಹೊಂದಿರಬೇಕು.
ಕನ್ನಡ ಮತ್ತು ಇಂಗ್ಲಿಷ್ ಭಾಷೆ ಮೇಲೆ ಹಿಡಿತ ಹೊಂದಿರಬೇಕು.

ವಯೋಮಿತಿ: ಗರಿಷ್ಠ 50 ವರ್ಷಗಳು

ವೇತನ ಶ್ರೇಣಿ: 21000 ರು. ತಿಂಗಳಿಗೆ.

ಅರ್ಜಿ ಸಲ್ಲಿಕೆ

ಅರ್ಜಿ ನಮೂನೆಯನ್ನು ವೆಬ್ಸೈಟ್ ವಿಳಾಸದಿಂದ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗೆ ಕಚೇರಿ ವಿಳಾಸಕ್ಕೆ ಕಳುಹಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ

ಅಸಿಸ್ಟೆಂಟ್ ರಿಜಿಸ್ಟ್ರಾರ್,
ಎಷ್ಟಾಬ್ಲಿಷ್ಮೆಂಟ್ ಸೆಕ್ಷನ್ (ಯೂನಿಟ್-1ಬಿ),
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ,ಬೆಂಗಳೂರು-560012

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-08-2017

ಆಯ್ಕೆ ವಿಧಾನ: ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನ ಹಾಗೂ ದಾಖಲಾತಿಗಳ ಪರಿಶೀಲನೆ ಮೂಲಕ ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಸೂಚನೆ

ಈ ನೇಮಕಾತಿಯು ಗುತ್ತಿಗೆ ಆಧಾರಿತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಒಂದು ವರ್ಷದ ಅವಧಿಯವರೆಗು ಕಾರ್ಯ ನಿರ್ವಹಿಸಬೇಕಾಗುತ್ತದೆ. ಅಭ್ಯರ್ಥಿಗಳ ಕಾರ್ಯದಕ್ಷತೆ ಮೇಲೆ ಮೂರು ವರ್ಷಗಳವರೆಗೂ ವಿಸ್ತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನು ಗಮನಿಸಿ: ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

English summary
The Indian institute of Science released new notification for the recruitment of total 24 (Twenty four) jobs for Security Assistant. Job seekers should apply before 21st August 2017.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia