ಇಂಡಿಯನ್ ಪೋಸ್ಟಲ್ ಸರ್ಕಲ್ ನಲ್ಲಿ 1137 ಬಿಪಿಎಂ, ಎಬಿಪಿಎಂ ಮತ್ತು ದಖ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಮಾರ್ಚ್ 8,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಬಿಪಿಎಂ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/-ರೂ ಮತ್ತು ಎಬಿಪಿಎಂ/ದಖ್ ಸೇವಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಓಸಿ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗ/ಮಹಿಳೆ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಮಹಿಳೆ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಭಾರತೀಯ ಪೋಸ್ಟಲ್ ಸರ್ಕಲ್ ನ ಅಧಿಕೃತ ವೆಬ್‌ಸೈಟ್ http://www.appost.in/gdsonline/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











