ಭಾರತೀಯ ಸೇನೆ 108 ಎಂಟಿಎಸ್,ಜ್ಯೂನಿಯರ್ ಆಫೀಸರ್ ಅಸಿಸ್ಟೆಂಟ್, ಫೈರ್‌ಮೆನ್ ಮತ್ತು ಟ್ರೇಡ್ಸ್‌ಮೆನ್ ಮೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 2,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಎಂಟಿಎಸ್,ಜ್ಯೂನಿಯರ್ ಆಫೀಸರ್ ಅಸಿಸ್ಟೆಂಟ್,ಫೈರ್‌ಮೆನ್ ಮತ್ತು ಟ್ರೇಡ್ಸ್‌ಮೆನ್ ಮೇಟ್ |
| Organisation | ಭಾರತೀಯ ಸೇನೆ |
| Educational Qualification | 10ನೇ ತರಗತಿ/ಮೆಟ್ರಿಕ್ಯುಲೇಶನ್; ದ್ವಿತೀಯ ಪಿಯುಸಿ/ಇಂಟರ್‌ಮೀಡಿಯೇಟ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ |
| Job Location | ಭಾರತದೆಲ್ಲೆಡೆ |
| Salary Scale | ಹುದ್ದೆಗಳಿಗನುಸಾರ ತಿಂಗಳಿಗೆ 18,000/-ರಿಂದ 63.200/-ರೂ |
| Application Start Date | December 14, 2019 |
| Application End Date | January 2, 2020 |
ಶೈಕ್ಷಣಿಕ ವಿದ್ಯಾರ್ಹತೆ:
ಭಾರತೀಯ ಸೇನೆ ನೇಮಕಾತಿಯ ವಿವಿಧ ಹುದ್ದೆಗಳಿಗೆ 10ನೇ ತರಗತಿ/ ಟ್ರಿಕ್ಯುಲೇಶನ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ; ದ್ವಿತೀಯ ಪಿಯುಸಿ/ಇಂಟರ್‌ಮೀಡಿಯೇಟ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೊರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಭಾರತೀಯ ಸೇನೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 18,000/-ರಿಂದ 63,200/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ/ಕೌಶಲ್ಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದತಕ್ಕದ್ದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ http://joinindianarmy.nic.in/Authentication.aspx ಗೆ ಭೇಟಿ ನೀಡಿ. ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಛೇರಿಯ ವಿಳಾಸಕ್ಕೆ ಜನವರಿ 2,2020ರೊಳಗೆ ಪೋಸ್ಟ್ ಮೂಲಕ ತಲುಪಿಸಬೇಕಿರುತ್ತದೆ. ಅರ್ಜಿ ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.
ಕಛೇರಿಯ ವಿಳಾಸ:
"ಕಮಾಂಡೆಂಟ್ 23 ಫೀಲ್ಡ್ ಮದ್ದುಗುಂಡು ಡಿಪೋ,
ಸಿ / ಒ 56 ಎಪಿಒ"
ಪಿನ್ -909723.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ನಮೂನೆಯನ್ನು ಪಡೆಯಲು ಮುಂದೆ ನೋಡಿ.


Click it and Unblock the Notifications











