ಭಾರತೀಯ ಸೇನೆ ನೇಮಕಾತಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ಟಕಟಣೆ ಹೊರಡಿಸಿದೆ. ಆಕಸ್ತರು ಅಧಿಕೃತ ವೆಬ್ಸೈಟ್ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ಗೆ ಹೋಗಿ ಮೇ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
CRITERIA | DETAILS |
Name Of The Posts | ವಿವಿಧ ಹುದ್ದೆಗಳು |
Organisation | ಭಾರತೀಯ ಸೇನೆ |
Educational Qualification | 8ನೇ ತರಗತಿ, 10ನೇ ತರಗತಿ, ಪಿಯುಸಿ |
Job Location | ಭಾರತದೆಲ್ಲೆಡೆ |
Application Start Date | April 16, 2019 |
Application End Date | May 15, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ 8ನೇ ತರಗತಿ, ಹತ್ತನೇ ತರಗತಿ ಅಥವಾ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 17 ವರ್ಷ 6ತಿಂಗಳು ಮತ್ತು ಗರಿಷ್ಟ 23 ವರ್ಷ ವಯೋಮತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ , ವೈದ್ಯಕೀಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ http://joinindianarmy.nic.in/alpha/index.htm ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ