Indian Army: ಭಾರತೀಯ ಸೇನೆಯಲ್ಲಿ 55 ಹುದ್ದೆಗಳ ನೇಮಕಾತಿ...ತಿಂಗಳಿಗೆ 56,100/-ರೂ ವೇತನ

ಭಾರತೀಯ ಸೇನೆಯು ಎನ್‌ಸಿಸಿ ವಿಶೇ‍ಷ ಪ್ರವೇಶ ಸ್ಕೀಮ್ ಮೂಲಕ ಒಟ್ಟು 55 ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತೀಯ ಸೇನೆಯಲ್ಲಿ 55 ಹುದ್ದೆಗಳಿವೆ...ಫೆ.2ರೊಳಗೆ ಅರ್ಜಿ ಹಾಕಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 2,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಎಸ್‌ಎಸ್‌ಸಿ ಅಧಿಕಾರಿ-ಎನ್‌ಸಿಸಿ ವಿಶೇ‍ಷ ಪ್ರವೇಶ
Organisation ಭಾರತೀಯ ಸೇನೆ
Educational Qualification ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ
Job Location ಭಾರತ
Salary Scale ತಿಂಗಳಿಗೆ 56,100/-ರೂ
Application Start Date January 8, 2020
Application End Date February 2, 2020

ಶೈಕ್ಷಣಿಕ ವಿದ್ಯಾರ್ಹತೆ:

ಭಾರತೀಯ ಸೇನೆ ನೇಮಕಾತಿಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಜುಲೈ 1,2020ರ ಅನ್ವಯ ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ( ಅಭ್ಯರ್ಥಿಯು ಜುಲೈ 2,1995ರ ಮುಂಚೆ ಮತ್ತು ಜುಲೈ 1,2001ರ ನಂತರ ಜನಿಸಿರಬಾರದು) ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಭಾರತೀಯ ಸೇನೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಭಾರತೀಯ ಸೇನೆ ನೇಮಕಾತಿಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 2,50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://joinindianarmy.nic.in/Default.aspx?id=5&lg=eng& ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 2,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian army recruitment 2020 notification has been released on official website for the recruitment of 55 ssc officer posts. Interested candidates can apply through online before 2nd February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+