ಬಾಗಲಕೋಟೆಯಲ್ಲಿ ವಿವಿಧ ಹುದ್ದೆಗಳಿಗೆ ಸೇನಾ ನೇಮಕಾತಿ ರ‍್ಯಾಲಿ

2018ರ ಜನವರಿ 16 ರಿಂದ 21ರ ತನಕ ನೇಮಕಾತಿ ರ‍್ಯಾಲಿ ನವನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕುರಿತು ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ ಅವರು ಮಾಹಿತಿ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನ.20ರಿಂದ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಪ್ರತಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿಪ್ರತಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ

2018ರ ಜನವರಿ 16 ರಿಂದ 21ರ ತನಕ ನೇಮಕಾತಿ ರ‍್ಯಾಲಿ ನವನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕುರಿತು ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ ಅವರು ಮಾಹಿತಿ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಸೇನಾ ನೇಮಕಾತಿ ರ‍್ಯಾಲಿ

ನೇಮಕಾತಿ ಹುದ್ದೆಗಳು

ಸೋಲ್ಜರ್ ಜನರಲ್, ಸೋಲ್ಜರ್ ಟೆಕ್ನೋಲಜಿ, ಸೋಲ್ಜರ್ ಕುಕ್ ಮತ್ತು ಎಸ್‌ಕೆಟಿ, ಸೋಲ್ಜರ್ ಟ್ರೇಡ್ಸ್‌ಮನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ವಿದ್ಯಾರ್ಹತೆ

ಎಸ್‌ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳು ರ‍್ಯಾಲಿಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ವಯೋಮಿತಿ

ಕನಿಷ್ಠ 17 ವರ್ಷ 6 ತಿಂಗಳು ಹಾಗೂ ಗರಿಷ್ಠ 23 ವರ್ಷ(ಸಾಮಾನ್ಯ ಕರ್ತವ್ಯ ವಿಭಾಗದ ಸೈನಿಕ ಹುದ್ದೆಗೆ ಗರಿಷ್ಠ 21 ವರ್ಷ) ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನೋಂದಣಿ ಪ್ರಕ್ರಿಯೆ

ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನಾ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ತಮ್ಮ ವಿವರಗಳೊಂದಿಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ನವೆಂಬರ್ 20ರಿಂದ ಜನವರಿ 1ರ ತನಕ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ.

ನೇಮಕಾತಿ ರ‍್ಯಾಲಿಯಲ್ಲಿ 11 ಜಿಲ್ಲೆಗಳ ಸುಮಾರು 25 ಸಾವಿರ ಅಭ್ಯರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಆಯ್ಕೆ ವಿಧಾನ

ರ‍್ಯಾಲಿಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಅಗತ್ಯ ಮೂಲ ದಾಖಲಾತಿಗಳನ್ನು ತರಲೇ ಬೇಕು. ಮೊದಲ ಹಂತದಲ್ಲಿ ದಾಖಲಾತಿ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಸದೃಢತೆ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಮೂರರಲ್ಲಿ ಅರ್ಹತೆ ಗಳಿಸುವ ಅಭ್ಯರ್ಥಿಗಳಿಗೆ ಮಾತ್ರ ಎರಡನೇ ಹಂತದ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಅವಕಾಶ.

ಸಾಮಾನ್ಯ ಪ್ರವೇಸ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧಾರಿಸಿ ಜೇಷ್ಠತಾ ಪಟ್ಟಿ ಸಿದ್ಧ ಪಡಿಸಿ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಸೇನಾ ನೇಮಕಾತಿ ರ‍್ಯಾಲಿ ಉಸ್ತುವಾರಿಯನ್ನು ಮಂಗಳೂರಿನ ಸೇನಾ ನೇಮಕಾತಿ ಕಚೇರಿಯ ಕರ್ನಲ್ ಎಂ.ಎ.ರಾಜಮಣ್ಣಾರ್ ವಹಿಸಿಕೊಂಡಿದ್ದಾರೆ. ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

For Quick Alerts
ALLOW NOTIFICATIONS  
For Daily Alerts

English summary
For the first time Indian army recruitment rally organized in Bagalkot district. Rally will beheld form January 16 to 21, 2018 at Navanagar grounds.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X