ಕಲಬುರಗಿಯಲ್ಲಿ ಸೇನಾ ನೇಮಕಾತಿ ರ್ಯಾಲಿ

ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು ಹಾಗು ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳು ಆನ್-ಲೈನ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ.

ಸಾಮಾನ್ಯ ಕರ್ತವ್ಯ ಹಾಗೂ ತಾಂತ್ರಿಕ ಸೇರಿದಂತೆ ವಿವಿಧ ವಿಭಾಗಗಳ ಸೈನಿಕ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಸೇನೆಯು ಕಲಬುರಗಿಯಲ್ಲಿ ರ್ಯಾಲಿ ನಡೆಸುತ್ತಿದೆ.

ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು ಹಾಗು ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳು ಆನ್-ಲೈನ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ.

ಸೇನಾ ನೇಮಕಾತಿ ರ್ಯಾಲಿ

ಹುದ್ದೆಗಳ ವಿವರ

ತಾಂತ್ರಿಕ, ನರ್ಸಿಂಗ್ ಅಸಿಸ್ಟೆಂಟ್, ಸಾಮಾನ್ಯ ಕರ್ತವ್ಯ, ಟ್ರೇಡ್ಸ್ ಮನ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್ ವಿಭಾಗಗಳಿಗೆ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ

ಆಯಾ ವಿಭಾಗಗಳಿಗೆ ಅನುಗುಣವಾಗಿ ಎಸ್ ಎಸ್ ಎಲ್ ಸಿ/ಪಿಯುಸಿ/ಇಂಜಿನಿಯರಿಂಗ್/ಡಿಪ್ಲೊಮಾ/ಬಿ,ಎಸ್ಸಿ/ಐಟಿಐ ಪೂರೈಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ

ಕನಿಷ್ಠ 17 ವರ್ಷ 6 ತಿಂಗಳು ಹಾಗೂ ಗರಿಷ್ಠ 23 ವರ್ಷ(ಸಾಮಾನ್ಯ ಕರ್ತವ್ಯ ವಿಭಾಗದ ಸೈನಿಕ ಹುದ್ದೆಗೆ ಗರಿಷ್ಠ 21 ವರ್ಷ) ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ

ಅಸಕ್ತ ಅಭ್ಯರ್ಥಿಗಳು 15-09-2017 ರೊಳಗಾಗಿ ಇಂಡಿಯನ್ ಆರ್ಮಿ ವೆಬ್ಸೈಟ್ ಮೂಲಕ ಹೆಸರು ನೋಂದಾವಣೆ ಮಾಡಿಕೊಳ್ಳಬೇಕು. ನೋಂದಾಯಿತ ಅಭ್ಯರ್ಥಿಗಳಿಗೆ ಮಾತ್ರ ರ್ಯಾಲಿಯಲ್ಲಿ ಭಾಗವಹಿಸಲು ಅವಕಾಶವಿದ್ದು, ಪ್ರವೇಶ ಪತ್ರವನ್ನು ಸೆಪ್ಟೆಂಬರ್ 19 ರ ನಂತರ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ರ್ಯಾಲಿಗೆ ಹಾಜರಾಗಬೇಕಾದ ದಿನಾಂಕವನ್ನು ಅಭ್ಯರ್ಥಿಗಳಿಗೆ ಇ-ಮೇಲ್ ಮೂಲಕ ತಿಳಿಸಲಾಗುತ್ತದೆ.

ಆಯ್ಕೆ ವಿಧಾನ

ರ್ಯಾಲಿಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಅಗತ್ಯ ಮೂಲ ದಾಖಲಾತಿಗಳನ್ನು ತರಲೇ ಬೇಕು. ಮೊದಲ ಹಂತದಲ್ಲಿ ದಾಖಲಾತಿ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಸದೃಢತೆ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಈ ಮೂರರಲ್ಲಿ ಅರ್ಹತೆ ಗಳಿಸುವ ಅಭ್ಯರ್ಥಿಗಳಿಗೆ ಮಾತ್ರ ಎರಡನೇ ಹಂತದ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಅವಕಾಶ.

ಸಾಮಾನ್ಯ ಪ್ರವೇಸ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧಾರಿಸಿ ಜೇಷ್ಠತಾ ಪಟ್ಟಿ ಸಿದ್ಧ ಪಡಿಸಿ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ರ್ಯಾಲಿ ನಡೆಯುವ ಸ್ಥಳ: ಜಿಲ್ಲಾ ಕ್ರೀಡಾಂಗಣ, ಕಲಬುರಗಿ

ಹೆಚ್ಚಿನ ಮಾಹಿತಿಗಾಗಿ joinindianarmy.nic.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Indian army invited online registration from the eligible candidates for recruitment rally.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X