ಇಂಡಿಯನ್ ಬ್ಯಾಂಕ್‌ನಲ್ಲಿ 138 ಹುದ್ದೆಗಳಿವೆ..ಫೆ.10ರೊಳಗೆ ಅರ್ಜಿ ಹಾಕಿ

ಇಂಡಿಯನ್ ಬ್ಯಾಂಕ್ 138 ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಇಂಡಿಯನ್ ಬ್ಯಾಂಕ್‌ನಲ್ಲಿ 138 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ವಿಶೇಷ ಅಧಿಕಾರಿ
Organisation ಇಂಡಿಯನ್ ಬ್ಯಾಂಕ್
Educational Qualification ಪದವಿ, ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 23,700/-ರಿಂದ 51,490/-ರೂ
Application Start Date January 22, 2020
Application End Date February 10, 2020

ವಿದ್ಯಾರ್ಹತೆ:

ವಿಶೇಷ ಅಧಿಕಾರಿ ಹುದ್ದೆಗಳಿಗೆ ಪದವಿ, ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜುಲೈ 1,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ವಿಶೇಷ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700/-ರಿಂದ 51,490/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪೋಸ್ಟ್ ಆಫೀಸ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://www.indianbank.net.in/jsp/IBSDisclaimer.jsp ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian bank recruitment 2020 notification has been released on official website for the recruitment of 138 specialist officer posts. Interested candidates can apply through online before 10th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+