Indian Bank Recruitment 2022 : 312 ತಜ್ಞ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಬ್ಯಾಂಕ್ ನೇಮಕಾತಿಯ 312 ತಜ್ಞ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 24,2022 ರಿಂದ ಜೂನ್ 14,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಭಾರತೀಯ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ...ಜೂ.14ರೊಳಗೆ ಅರ್ಜಿ ಹಾಕಿ

Indian Bank ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತೀಯ ಬ್ಯಾಂಕ್ ನೇಮಕಾತಿಯ ತಜ್ಞ ಅಧಿಕಾರಿ ಹುದ್ದೆಗಳಿಗೆ ಸಿಎ, ಐಸಿಡಬ್ಲ್ಯೂಎ, ಪದವಿ, ಸ್ನಾತಕೋತ್ತರ ಪದವಿ, ಬಿಇ/ಬಿಟೆಕ್, ಎಂಇ/ಎಂಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Indian Bank ನೇಮಕಾತಿ 2022 ವಯೋಮಿತಿ :

ಭಾರತೀಯ ಬ್ಯಾಂಕ್ ನೇಮಕಾತಿಯ ತಜ್ಞ ಅಧಿಕಾರಿ ಹುದ್ದೆಗಳಿಗೆ ಕನಿಷ್ಟ 20 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Indian Bank ನೇಮಕಾತಿ 2022 ವೇತನದ ವಿವರ :

ಭಾರತೀಯ ಬ್ಯಾಂಕ್ ನೇಮಕಾತಿಯ ತಜ್ಞ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 89,890/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಭಾರತೀಯ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ...ಜೂ.14ರೊಳಗೆ ಅರ್ಜಿ ಹಾಕಿ

Indian Bank ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ಬ್ಯಾಂಕ್ ನೇಮಕಾತಿಯ ತಜ್ಞ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Indian Bank ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ಬ್ಯಾಂಕ್ ನೇಮಕಾತಿಯ ತಜ್ಞ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 850/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Indian Bank ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಭಾರತೀಯ ಬ್ಯಾಂಕ್ ನೇಮಕಾತಿಯ ತಜ್ಞ ಅಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 24,2022 ರಿಂದ ಜೂನ್ 14,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian bank recruitment 2022 notification has been released for 312 specialist officer posts. Interested candidates can apply before June 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+