Indian Coast Guard Recruitment 2019: ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕೋಸ್ಟ್ ಗಾರ್ಡ್ ನಾವಿಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಅಕ್ಟೋಬರ್ 30,2019 ರಿಂದ ನವೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಭಾರತೀಯ ಕೋಸ್ಟ್  ಗಾರ್ಡ್‌ನಲ್ಲಿ ನಾವಿಕ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ನಾವಿಕ (ಡೊಮೆಸ್ಟಿಕ್ ಬ್ರಾಂಚ್)
Organisation ಭಾರತೀಯ ಕೋಸ್ಟ್ ಗಾರ್ಡ್
Educational Qualification 10ನೇ ತರಗತಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 21,700/-ರೂ
Application Start Date October 30, 2019
Application End Date November 8, 2019

ಶೈಕ್ಷಣಿಕ ವಿದ್ಯಾರ್ಹತೆ:

ಅಭ್ಯರ್ಥಿಯು ರಾಜ್ಯ ಅಥವಾ ಕೇಂದ್ರಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಶೇ 50.ರಷ್ಟು ಅಂಕಗಳೊಂದಿಗೆ 10ನೇ ತರಗತಿಯನ್ನು ಪೂರೈಸಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಏಪ್ರಿಲ್ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ನ ಅಧಿಕೃತ ವೆಬ್‌ಸೈಟ್‌ https://joinindiancoastguard.gov.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
Indian coast guard recruitment 2019 notification has been released on official website for the recruitment of navik posts. Interested candidates can apply through online before 8th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X