ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2019: ನಾವಿಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2019 ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ನಾವಿಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಭಾರತೀಯ ನಾಗರೀಕ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಜನವರಿ 21.2019 ರಿಂದ ಜನವರಿ 31.2019ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ಕೋಸ್ಟ್ ಗಾರ್ಡ್ ನಾವಿಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ನಾವಿಕ್
Organisation ಇಂಡಿಯನ್ ಕೋಸ್ಟ್ ಗಾರ್ಡ್
Educational Qualification 10+2 (ಗಣಿತ ಮತ್ತು ಭೌತಶಾಸ್ತ್ರ)
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 21.700/- ರೂ
Application Start Date January 21, 2019
Application End Date January 31, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2ನಲ್ಲಿ ಗಣಿತ ಮತ್ತು ಭೌತಶಾಸ್ತ್ರದಲ್ಲಿ ಶೇ 50%ರಷ್ಟು ಅಂಗಳನ್ನು ಕೇಂದ್ರ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಲ್ಲಿ ಉತ್ತೀರ್ಣರಾಗಿರಬೇಕು. ( SC/ST ಅಭ್ಯರ್ಥಿಗಳಿಗೆ 5% ರಷ್ಟು ಸಡಿಲಿಕೆಯನ್ನು ನೀಡಲಾಗಿದೆ ಮತ್ತು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಸ್ಪೋರ್ಟ್ಸ್ ನಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳಿಗೆ ಸಡಿಲಿಕೆಯನ್ನು ನೀಡಲಾಗುತ್ತದೆ.)

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 22 ವರ್ಷ ಒಳಗಿರಬೇಕು. ಅಂದರೆ ಆಗಸ್ಟ್ 1.1997 ರಿಂದ ಜುಲೈ 31.2001 ರೊಳಗೆ ಜನಿಸಿರಬೇಕು.

SC/ST ಅಭ್ಯರ್ಥಿಗಳಿಗೆ 5ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಇಂಡಿಯನ್ ಕೋಸ್ಟ್ ಗಾರ್ಡ್ ನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,700/-ರೂ ವೇತನದ ಜೊತೆ ಅವರ ಹುದ್ದೆಗನುಸಾರ ಇನ್ನಿತರೆ ಭತ್ಯೆಗಳನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕಳುಹಿಸಿದ ಅರ್ಜಿಗಳ ಕಿರುಪಟ್ಟಿಯನ್ನು ಮಾಡಲಾಗುತ್ತದೆ. ಮಾರ್ಚ್ - ಏಪ್ರಿಲ್ 2019ರಲ್ಲಿ ಲಿಖಿತ ಪರೀಕ್ಷೆಯನ್ನು ನೀಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಫಿಸಿಕಲ್ ಫಿಟ್ನೆಸ್ ಪರೀಕ್ಷೆಯನ್ನು ನೀಡಲಾಗುತ್ತದೆ. ಈ ಪರೀಕ್ಷೆಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಇಲ್ಲಿ ಲಾಗಿನ್ ಆಗಿ http://www.joinindiancoastguard.gov.in/ ಮತ್ತು opportunities button ಮೇಲೆ ಕ್ಲಿಕ್ ಮಾಡಿ.

ತದನಂತರ ಅಲ್ಲಿ ಕೇಳಲಾದ ಮಾಹಿತಿಗಳನ್ನು ಭರ್ತಿ ಮಾಡಿ ನಂತರ Submit button ಅನ್ನು ಕ್ಲಿಕ್ ಮಾಡಿ

ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಜನವರಿ 21.2019 ರಿಂದ ಜನವರಿ 31.2019 ರ ವರೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Indian Coast Guard recruitment 2019 notification has been released on official website for the recruitment Indian Coast Guard. The candidate who is looking for Navik (General Duty) 10+2 Entry 02/2019 Batch can apply online application from 21st January 2019 and before 31st January 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X