Indian Coast Guard Recruitment: 260 ನಾವಿಕ ಹುದ್ದೆಗಳ ನೇಮಕಾತಿ..ತಿಂಗಳಿಗೆ 21,700/-ರೂ ವೇತನ

ಭಾರತೀಯ ಕೋಸ್ಟ್ ಗಾರ್ಡ್ 260 ನಾವಿಕ (ಜನರಲ್ ಡ್ಯುಟಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಜನವರಿ 26,2020 ರಿಂದ ಫೆಬ್ರವರಿ 2,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ 260 ಹುದ್ದೆಗಳಿವೆ..ಫೆ.2ರೊಳಗೆ ಅರ್ಜಿ ಹಾಕಿ

 

CRITERIA DETAILS
Name Of The Posts ನಾವಿಕ (ಜನರಲ್ ಡ್ಯುಟಿ)
Organisation ಭಾರತೀಯ ಕೋಸ್ಟ್ ಗಾರ್ಡ್
Educational Qualification 10+2/ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 21,700/-ರೂ
Application Start Date January 26, 2020
Application End Date February 2, 2020

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಟರ್‌ಮೀಡಿಯೇಟ್‌/10+2/ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯವನ್ನು ಅಧ್ಯಯನ ಮಾಡಿರಬೇಕು ಹಾಗೆಯೇ ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿಯ ನಾವಿಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

 

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್‌ https://joinindiancoastguard.gov.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 26,2020ರಿಂದ ಫೆಬ್ರವರಿ 2,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Indian Coast Guard recruitment 2020 notification has been released on official website for the recruitment of 260 Navik (gneral duty) posts. Interested candidates can apply through online before 2nd February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X