Indian Coast Guard Recruitment 2020: 358 ನಾವಿಕ ಮತ್ತು ಯಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕೋಸ್ಟ್ ಗಾರ್ಡ್ 358 ನಾವಿಕ ಮತ್ತು ಯಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಜನವರಿ 5,2021 ರಿಂದ ಜನವರಿ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ಉದ್ಯೋಗಾವಕಾಶ...ಜ.19ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ/ಇಂಟರ್‌ಮೀಡಿಯೇಟ್, 10ನೇ ತರಗತಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ಮತ್ತು ಯಾಂತ್ರಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿಯ ನಾವಿಕ ಮತ್ತು ಯಾಂತ್ರಿಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್‌ https://joinindiancoastguard.gov.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 5,2021 ರಿಂದ ಜನವರಿ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian coast guard recruitment 2020 notification has been released for 358 navik and yantrik posts. Interested candidates can apply through online before January 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+