ಭಾರತೀಯ ಕೋಸ್ಟ್ ಗಾರ್ಡ್ 50 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ನವೆಂಬರ್ 30,2020 ರಿಂದ ಡಿಸೆಂಬರ್ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಏಪ್ರಿಲ್ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿಯ ನಾವಿಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್ https://joinindiancoastguard.gov.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 30,2020 ರಿಂದ ಡಿಸೆಂಬರ್ 7,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











