Indian Coast Guard Recruitment 2021: 350 ನಾವಿಕ ಮತ್ತು ಯಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ 350 ಹುದ್ದೆಗಳ ನೇಮಕಾತಿ

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ 350 ನಾವಿಕ ಮತ್ತು ಯಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 2 ರಿಂದ ಜುಲೈ 16,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

10ನೇ ತರಗತಿ/ಮೆಟ್ರಿಕ್ಯುಲೇಶನ್; 10+2/ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿಯ ನಾವಿಕ ಮತ್ತು ಯಾಂತ್ರಿಕ ಹುದ್ದೆಗಳಿಗೆ ಐಸಿಜಿ ಸಿಜಿಇಪಿಟಿ ನೇಮಕಾತಿ ಅಧಿಸೂಚನೆಯಲ್ಲಿರುವಂತೆ ಕನಿಷ್ಟ ೧೮ ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ನಾವಿಕ ಮತ್ತು ಯಾಂತ್ರಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 29,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ,ಪಂ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://joinindiancoastguard.cdac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 2 ರಿಂದ ಜುಲೈ 16,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
India coast guard recruitment 2021 notification has been released for 350 navik and yantrik posts. Interested candidates can apply through online before july 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X