Indian Navy Group C Recruitment 2022 : 1531 ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸಶಸ್ತ್ರ ಪಡೆಗಳ ಅಡಿಯಲ್ಲಿ ಭಾರತೀಯ ನೌಕಾಪಡೆಯು ಗ್ರೂಪ್ C ಹುದ್ದೆಗಳ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಒಂದು ಸಾವಿರದ ಐನೂರ ಮೂವತ್ತೊಂದು (1531) ಟ್ರೇಡ್ಸ್‌ಮ್ಯಾನ್ (ಗುಂಪು C) ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಅರ್ಹ ಮತ್ತು ಆಸಕ್ತ ಮಾಜಿ-ನೌಕಾದಳದ ಅಪ್ರೆಂಟಿಸ್ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಭಾರತೀಯ ನೌಕಾಪಡೆಯ ಟ್ರೇಡ್ಸ್‌ಮ್ಯಾನ್ ನೇಮಕಾತಿ 2022 ರ ಮೂಲಕ ಪೂರ್ಣ ಸಮಯದ ಆಧಾರದ ಮೇಲೆ ನೌಕಾಪಡೆಯನ್ನು ಮುಂಬೈ, ವಿಶಾಖಪಟ್ಟಣಂ, ಕೊಚ್ಚಿ ಅಥವಾ ಭಾರತದಲ್ಲಿ ಎಲ್ಲಿಯಾದರೂ ನೇವಲ್ ಕಮಾಂಡ್ ಘಟಕಗಳಲ್ಲಿ ಪೋಸ್ಟ್ ಮಾಡಲಾಗುತ್ತದೆ. ಆಸಕ್ತರು ನೋಂದಣಿ-ಕಮ್-ಅರ್ಜಿ ಪ್ರಕ್ರಿಯೆಯನ್ನು ಮಾಡಲು ಮಾರ್ಚ್ 21, 2022 ಕೊನೆಯ ದಿನವಾಗಿರುತ್ತದೆ.

ಭಾರತೀಯ ನೌಕಾಪಡೆಯಲ್ಲಿ 1531 ಹುದ್ದೆಗಳ ನೇಮಕಾತಿ

Indian Navy Group C ನೇಮಕಾತಿ 2022 ವಿದ್ಯಾರ್ಹತೆ :

ಭಾರತೀಯ ನೌಕಾಪಡೆ ನೇಮಕಾತಿಯ ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

Indian Navy Group C ನೇಮಕಾತಿ 2022 ವಯೋಮಿತಿ :

ಭಾರತೀಯ ನೌಕಾಪಡೆ ನೇಮಕಾತಿಯ ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Indian Navy Group C ನೇಮಕಾತಿ 2022 ವೇತನ :

ಭಾರತೀಯ ನೌಕಾಪಡೆ ನೇಮಕಾತಿಯ ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 63,200/-ರೂ ವರೆಗೆ ವೇತನವನ್ನು ನೀಡಲಾಗುವುದು.

Indian Navy Group C ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ನೌಕಾಪಡೆ ನೇಮಕಾತಿಯ ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ, ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Indian Navy Group C ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ನೌಕಾಪಡೆ ನೇಮಕಾತಿಯ ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Indian Navy Group C ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ನೌಕಾಪಡೆ ನೇಮಕಾತಿಯ ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.joinindiannavy.gov.in/en/page/civilian.html ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 21,2022ರೊಳಗೆ ಅರ್ಜಿಯನ್ನು ಹಾಕಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Indian navy group C recruitment 2022 notification has been released for 1531 tradesman posts. Interested candidates can apply before March 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+