ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೌಕಾಪಡೆಯ ನಾಲ್ಕು ವಿಭಾಗಗಳಲ್ಲಿ 108 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
ನಾಯಕ್, ಇಂಜಿನಿಯರಿಂಗ್ ಬ್ರಾಂಚ್, ಎಲೆಕ್ಟ್ರಿಕಲ್ ಬ್ರಾಂಚ್, ಜನರಲ್ ಸರ್ವಿಸ್ ಕೇಡರ್ ವಿಭಾಗಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ವೇಳೆ ತಮ್ಮ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಲು ಸೂಚಿಸಲಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 05-01-2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-01-2018
ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











